
ಹಿಟ್ನೆಹೆಬ್ಬಾಗಿಲು, ಆಯಿತನಹಳ್ಳಿ, ಬೆಕ್ಕರ್ ಮತ್ತು ಗೊರಹಳ್ಳಿ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಹಾಗು ಅತ್ತಿಗೋಡು ಕೆರೆ ಮತ್ತು ಬೆಟ್ಟದಪುರ ಕೆರೆ ಏರಿಯಲ್ಲಿ ರಕ್ಷಣಾ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ವಿಪಕ್ಷ ಶಾಸಕನಾದರೂ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿದಿಲ್ಲ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಹಲವು ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿಸಿದ್ದು ಸರ್ಕಾರ ಬದಲಾದ ವೇಳೆ ಕೆಲ ಅನುದಾನಗಳನ್ನು ಹಿಂಪಡೆಯಲಾಗಿತ್ತು, ವಿಪಕ್ಷ ಆಡಳಿತದಲ್ಲಿದ್ದರೂ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಅನುದಾನ ತರಲಾಗುತ್ತಿದೆ ಎಂದರು, ಶಾಸಕನಾದ ಕಳೆದ ಎರಡೂವರೆ ವರ್ಷದಿಂದ ತಾಲೂಕಿನ ಹಲವು ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು ಎಚ್ಚರ ವಹಿಸಬೇಕು, ಹಿಂದಿನ ಶಾಸಕರು ವಿಪಕ್ಷ ಅಧಿಕಾರದಲ್ಲಿದ್ದಾಗ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡದ ಪರಿಣಾಮ ಹಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳು ಸಮಸ್ಯೆಯಾಗಿ ಪರಿಣಮಿಸಿವೆ, ತಾಲ್ಲೂಕಿನ ಎಲ್ಲ ಗ್ರಾಮಗಳ ಅಭಿವದ್ಧಿ ಒಂದೇ ಬಾರಿ ಸಾಧ್ಯವಿಲ್ಲ, ಹಂತ ಹಂತವಾಗಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವ ಭರವಸೆ ನೀಡಿದರು.

ಈ ಸಂದರ್ಭ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಸದಸ್ಯೆ ಶೋಭಾ, ಬೆಕ್ಕರೆ ಗ್ರಾ.ಪಂ ಸದಸ್ಯರಾದ ಜ್ಯೋತಿ ರವಿಕುಮಾರ್, ಜಗದೀಶ್, ರುಕ್ಕಣ್ಣ, ಪಿಡಬ್ಲ್ಯುಡಿ ಎಇಇ ನಾಗರಾಜ್, ಜಿ.ಪಂ ಎಇಇ ಪ್ರಭು, ಆರ್ ಡಬ್ಲ್ಯುಎಸ್ ಎಇಇ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾ.ಪಂ ಸಹಾಯಕ ನಿರ್ದೇಶಕ ರಘುನಾಥ್, ಬಿಸಿಎಂ ಅಧಿಕಾರಿ ಮೋಹನ್ ರಾಜ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಗ್ರಾಮದ ಮುಖಂಡರು ಹಾಜರಿದ್ದರು.