
ಜವರೀಕೊಪ್ಪಲು ಗ್ರಾಮ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 20.00 ಲಕ್ಷ ರೂ, ಮಾಲಂಗಿ ಗ್ರಾಮ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 25.00 ಲಕ್ಷ ರೂ, ಸತ್ಯಾಗಾಲ ಗ್ರಾಮ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 25.00 ಲಕ್ಷ ರೂ, ಹಾಗು ತಮ್ಮಡಹಳ್ಳಿ ಗ್ರಾಮ ಪರಿಮಿತಿಯಲ್ಲಿ 25.00 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಶಕ್ತಿಮೀರಿ ಕೆಲಸ ಮಾಡಿ ಅಭಿವೃದ್ಧಿ ಪಡಿಸುತ್ತೇನೆ ಎಂದು ಶಾಸಕ ಕೆ ಮಹದೇವ್ ತಿಳಿಸಿದರು.
ಕಳೆದ ನಲವತ್ತು ವರ್ಷದಿಂದ ಅಭಿವೃದ್ಧಿ ಕಾಣದ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ನಾನು ಗೆದ್ದು ಎರಡೂವರೆ ವರ್ಷಗಳಲ್ಲಿ ಎಲ್ಲಾ ಗ್ರಾಮಗಳನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಹಂತಹಂತವಾಗಿ ಪ್ರತಿ ಹಳ್ಳಿಗಳಿಗೂ ಆದ್ಯತೆ ನೀಡಿ ಅಭಿವೃದ್ಧಿ ಮಾಡುತ್ತೇನೆ. ಗ್ರಾಮಗಳ ಅಭಿವೃದ್ಧಿಗೆ ಸಂಪೂರ್ಣವಾಗಿ ಸಹಕಾರ ನೀಡಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎಇಇ ಪ್ರಭು, ಬಿಇಓ ತಿಮ್ಮೇಗೌಡ, ಗ್ರಾಮ ಪಂಚಾಯಿತಿ ಸಹಾಯಕ ನಿರ್ದೇಶಕ ರಘುನಾಥ್, ಕಂದಾಯ ನಿರೀಕ್ಷಕ ಪಾಂಡು ಇದ್ದಂತೆ ಗ್ರಾಮಸ್ಥರು ಹಾಜರಿದ್ದರು.