
ತಾಲ್ಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ಉದ್ದೇಶದಿಂದ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರ ಸಮಸ್ಯೆಗಳಾದ ಪಿಂಚಣಿ ವೇತನ, ಜಮೀನು ಸರ್ವೆ, ಪಹಣಿ ಮತ್ತು ನಕ್ಷೆ ಪಡೆಯುವುದು ಸೇರಿದಂತೆ ಇತರೆ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಇಲಾಖೆಗಳನ್ನು ಸಂಪರ್ಕಿಸಲು ಪಟ್ಟಣ ಪ್ರದೇಶಗಳಿಗೆ ಧಾವಿಸುವುದರಿಂದ ಸಮಯ ಮತ್ತು ಹಣದ ವ್ಯರ್ಥ ತಪ್ಪಿಸುವ ಉದ್ದೇಶದಿಂದ ಅಧಿಕಾರಿಗಳು ಅವರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಬಗೆಹರಿಸಲು ಕಂದಾಯ ಇಲಾಖೆ ಜಾರಿಗೆ ತಂದಿರುವ ವಿನೂತನ ಕಾರ್ಯಕ್ರಮ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ನಡಿಗೆ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.
ಇದೆ ಸಂದರ್ಭದಲ್ಲಿ ಫಲಾನುಭವಿಗಳಿಗೆ ಪಿಂಚಣಿ ವೇತನ ಮಂಜೂರಾತಿ ಆದೇಶ ಪತ್ರ ವಿತರಿಸಿದರು.
ಈ ಸಂದರ್ಭ ತಹಸೀಲ್ದಾರ್ ಶ್ವೇತ ಎನ್ ರವೀಂದ್ರ, ಕಾರ್ಯ ನಿರ್ವಹಣಾಧಿಕಾರಿ ಶ್ರುತಿ, ಶಿರಸ್ತೆದಾರ್ ಟ್ರಿಜಾ, ಉಪ ತಹಸೀಲ್ದಾರ್ ಕೆಂಚಯ್ಯ, ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಬಿಇಒ ವೈ.ಕೆ.ತಿಮ್ಮೇಗೌಡ, ಸಬ್ ಇನ್ಸ್ಪೆಕ್ಟರ್ ಮಹೇಶ್, ಸಿಡಿಪಿಒ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಕಂದಾಯ ಅಧಿಕಾರಿ ಶ್ರೀಧರ್, ಗ್ರಾಮಲೆಕ್ಕಿಗ ಮಂಜುನಾಥ, ಗ್ರಾ.ಪಂ ಸದಸ್ಯರಾದ ಹೆಚ್.ಆರ್ ದೀಪು, ನೀಲಾಶ್ರೀನಿವಾಸ್, ಶಿವಮೂರ್ತಿ, ಮುಖಂಡ ಎಚ್.ಎ ರಾಮಚಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.
