
ಟಿಎಪಿಸಿಎಂಎಸ್ ಗೋದಾಮು ಅವರಣದಲ್ಲಿ 30 ಟನ್ ತೂಕದ ಆಹಾರ ಪಡಿತರ ಪದಾರ್ಥಗಳನ್ನು ಸಾಗಿಸುವ ಲಾರಿಗಳು ಸಂಚರಿಸುವುದರಿಂದ ಗುಣಮಟ್ಟದ ಕಾಮಗಾರಿಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಕೆ ಮಹದೇವ್ ತಿಳಿಸಿದರು. ಪಟ್ಟಣದ ಟಿಎಪಿಸಿಎಂಎಸ್ ಅವರಣದಲ್ಲಿ ಅಂದಾಜು 7.50 ಲಕ್ಷ ರೂ ಪಕ್ಷದಲ್ಲಿ ಕಾಂಕ್ರೀಟ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗೋದಾಮಿನಲ್ಲಿ ಪಡಿತರ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವ ಸಂದರ್ಭ ಸಾರ್ವಜನಿಕರಿಗೆ ಹಾಗೂ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಂಬಂಧಪಟ್ಟ ಲಾರಿ ಚಾಲಕ ಹಾಗೂ ಮಾಲೀಕರನ್ನು ಕರೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರ್ವಹಿಸಬೇಕೆಂದು ಸೂಚಿಸಿದರು. ನೂತನವಾಗಿ ಆಯ್ಕೆಯಾಗಿರುವ ಟಿಎಪಿಸಿಎಂಎಸ್ ಆಡಳಿತ ಮಂಡಳಿ ತಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು,ಸಂಸ್ಥೆಗೆ ಸರ್ಕಾರದಿಂದ ಯಾವುದೇ ಅನುದಾನ ನೀಡುತ್ತಿಲ್ಲ. ನಿಮ್ಮ ಸಹಕಾರ ಸಂಘದ ಬಂಡವಾಳದಲ್ಲಿ ಕಾರ್ಯನಿರ್ವಹಿಸಬೇಕು ಎಲ್ಲರೂ ಒಗ್ಗಟ್ಟಿನಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಬದ್ಧತೆಯಿಂದ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ ಸರ್ವಮಂಗಳ ನಿರ್ದೇಶಕರಾದ ಜಲೇಂದ್ರ ಸುನೀತಾ ಕುಮಾರಪ್ಪ ತಿಮ್ಮನಾಯಕ ಪುರಸಭೆ ಅಧ್ಯಕ್ಷ ಮಂಜುನಾಥ್ ಸದಸ್ಯರಾದ ಪ್ರಕಾಶ್ ಸಿಂಗ್ ಸಂಘದ ಸಿಗೋ ಕಲಾವತಿ ಮುಖಂಡರಾದ ರಾಜೇಗೌಡ ವಿದ್ಯಾಶಂಕರ್ ಪರಮೇಶ್ ಹಾಗೂ ಮತ್ತಿತರರು ಹಾಜರಿದ್ದರು