
ನೆರೆ ಪರಿಹಾರದ ಅನುದಾನವನ್ನು ನೆರೆ ಸಂತ್ರಸ್ತರು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮತ್ತು ಕಂದಾಯ ಇಲಾಖೆ ಸಹಯೋಗದೊಂದಿಗೆ ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದಲ್ಲಿ ವಸತಿ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿದರು . ಮೈಸೂರು ಕೊಡಗು ಚಿಕ್ಕಮಗಳೂರು ಹಾಸನ ಜಿಲ್ಲೆಗಳ ಬಹುಭಾಗದಲ್ಲಿ ಸತತವಾಗಿ ಬೀಳುವ ಮಳೆಯಿಂದಾಗಿ ಸಾರ್ವಜನಿಕರ ಆಸ್ತಿಪಾಸ್ತಿ ಬಹಳಷ್ಟು ಹಾನಿಗೆ ಒಳಗಾಗಿತ್ತು ಕಳೆದ ಮೂರು ವರ್ಷಗಳಿಂದ ಇದೇ ರೀತಿ ಸಂಕಷ್ಟವನ್ನು ಜನಸಾಮಾನ್ಯರು ಅನುಭವಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಹೊಸ ಮನೆ ನಿರ್ಮಾಣ ಮಾಡಿಕೊಳ್ಳಲು ನೆರೆ ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನವನ್ನು ನೀಡುವ ಕಾರ್ಯ ಮಾಡುತ್ತಿದೆ ಇದರಲ್ಲಿ ಕೇಂದ್ರ ಸರ್ಕಾರದ ಒಂದು ಲಕ್ಷ ಹಾಗೂ ರಾಜ್ಯ ಸರ್ಕಾರದ 4 ಲಕ್ಷ ಸೇರ್ಪಡೆಯಾಗಿರುತ್ತದೆ ಈ ಹಿಂದೆ ನೆರೆ ಸಂತ್ರಸ್ತರಿಗೆ ಬಿಡುಗಡೆ ಮಾಡಿರಲಿಲ್ಲ ಇಂದಿನ ಪ್ರಧಾನಿ ನರೇಂದ್ರ ಮೋದಿಯ ಅಭಿವೃದ್ಧಿ ಚಿಂತನೆಯಡಿಯಲ್ಲಿ ಮುಂದಾಗಿದ್ದು ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಪ್ರತಿ ಸಂದರ್ಭದಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಸಾಮಾನ್ಯರ ಹಿತವನ್ನು ಕಾಪಾಡುತ್ತದೆ ಎಂದು ತಿಳಿಸಿದರು.

ಶಾಸಕ ಕೆ ಮಹದೇವ್ ಮಾತನಾಡಿ ತಾಲೂಕಿನ ಗಡಿ ಭಾಗಗಳಲ್ಲಿ ನೆರೆಹಾವಳಿಯಿಂದ ಅನೇಕ ಆಸ್ತಿಪಾಸ್ತಿ ನಷ್ಟವಾಗಿತ್ತು ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ನೆರೆ ಸಂತ್ರಸ್ತರ ಪುನರ್ವಸತಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗಿದೆ ಸಂಕಷ್ಟವನ್ನು ಅರಿತ ಯಡಿಯೂರಪ್ಪನವರು ಪುನರ್ವಸತಿ ಯೋಜನೆಗೆ ಚಾಲನೆ ನೀಡಿ ನೊಂದವರ ಬಾಳಿಗೆ ಬೆಳಕಾಗಿ ಇದ್ದಾರೆ ಎಂದು ಶ್ಲಾಘಿಸಿದರು.

ಇದೆ ಸಂದರ್ಭದಲ್ಲಿ ವಿಕಲಚೇತನರ ಕಲ್ಯಾಣ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ನಿರೂಪ ರಾಜೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಟಿ ರಂಗಸ್ವಾಮಿ , ಸದಸ್ಯ ಮಲ್ಲಿಕಾರ್ಜುನ್, ಐಲಾಪುರ ರಾಮು, ಪುರಸಭೆ ಅಧ್ಯಕ್ಷ ಮಂಜುನಾಥ್ ಸಿಂಗ್, ಸದಸ್ಯ ಸದಸ್ಯ ಪ್ರಕಾಶ್ ಸಿಂಗ್, ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ , ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ರಾಜ್ಯನಿರ್ದೇಶಕ ಆರ್. ಟಿ ಸತೀಶ್, ತಹಸೀಲ್ದಾರ್ ಶ್ವೇತಾ ಇನ್ ರವೀಂದ್ರ , ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿಸಿ ಶೃತಿ. ಕ್ಷೇತ್ರ ಶಿಕ್ಷಣ ಅಧಿಕಾರಿ YK ತಿಮ್ಮೇಗೌಡ ಮತ್ತಿತರರು ಹಾಜರಿದ್ದರು.