
ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಡಾ. ಬಾಬು ಜಗಜೀವನ್ ರಾಮ್ ಅವರ 114ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹನೀಯರು ಜಯಂತಿಗಳು ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗದೆ ಎಲ್ಲ ವರ್ಗದವರು ಒಂದಾಗಿ ಅವರ ಜೀವನ ಆದರ್ಶಗಳನ್ನು ಪಾಲಿಸಬೇಕಿದೆ ಎಂದರು.

ಪ್ರಧಾನ ಭಾಷಣಕಾರರಾಗಿ ಮಾತನಾಡಿದ ಹುಣಸೂರು ತಾಲೂಕು ಕೊತ್ತೆಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆಂಗ್ಲ ಭಾಷೆ ಶಿಕ್ಷಕ ಜಿ ಮಹದೇವ್ ರವರು ತಮ್ಮ ರಾಜಕೀಯ ಸುದೀರ್ಘ ಇತಿಹಾಸದಲ್ಲಿ ಕೇಂದ್ರ ಸಚಿವರಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದ ಡಾ. ಬಾಬು ಜಗಜೀವನ್ ರಾಮ್ ಅವರು ಅನ್ಯಾಯದ ವಿರುದ್ಧ ಧ್ವನಿಯೆತ್ತಿ ಶೋಷಿತರ ಪರ ನ್ಯಾಯ ಒದಗಿಸುವ ಕರ್ತವ್ಯ ನಿಭಾಯಿಸಿದವರು. ಮುರಾರ್ಜಿ ದೇಸಾಯಿ ಅವರು ಪ್ರಧಾನ ಮಂತ್ರಿಯಾಗಿದ್ದ ಅವಧಿಯಲ್ಲಿ ಉಪ ಪ್ರಧಾನಿಯಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಮೂಲಕ ದೇಶಾದ್ಯಂತ ಮನೆಮಾತಾದರು ಎಂದರು.

ತಹಸೀಲ್ದಾರ್ ಚಂದ್ರಮೌಳಿ ಅವರು ಮಾತನಾಡಿ ತಮ್ಮ ರಾಜಕೀಯ ಜೀವನದಲ್ಲಿ ಎಲೆಮರೆ ಕಾಯಿಯಂತೆ ಸಮಾಜ ಸೇವೆ ಮಾಡಿದ ಕೀರ್ತಿ ಡಾ. ಬಾಬು ಜಗಜೀವನ್ ರಾಮ್ ಅವರದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಕೌಸಲ್ಯ ಲೋಕೇಶ್, ತಾಲೂಕು ಪಂಚಾಯಿತಿ ಸದಸ್ಯರಾದ ರಾಮು, ಆರ್. ಎಸ್. ಮಹದೇವ್, ಆದಿಜಾಂಬವ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷ ಸಿಗುರು ವಿಜಯಕುಮಾರ್, ತಾಲೂಕು ಅಧ್ಯಕ್ಷ ಭೂತನಹಳ್ಳಿ ಶಿವಣ್ಣ, ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಮುಖಂಡರಾದ ಮಹದೇವ್ ರಾಜಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಹಾಜರಿದ್ದರು
