
ಕೊರೊನಾ ಸಂಕಷ್ಟ ಕಾಲದಲ್ಲಿಯೂ ತಾಲ್ಲೂಕಿನ ಅಭಿವೃದ್ಧಿಗಾಗಿ ಅನುದಾನ ಮಂಜೂರು ಮಾಡಿಸಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದಾಗಿ ಶಾಸಕ ಕೆ.ಮಹದೇವ್ ಹೇಳಿದರು. ತಾಲ್ಲೂಕಿನ ವಿವಿಧೆಡೆ 1.20 ಕೋಟಿ ವೆಚ್ಚದ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಅವರು ಮಾತನಾಡಿ ಶಾಸಕನಾಗಿ ಆಯ್ಕೆಯಾದ ಮೂರು ವರ್ಷದ ಅವಧಿಯಲ್ಲಿ ಪಕ್ಷಾತೀತವಾಗಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯೂ ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೆನೆ, ಮೂವತ್ತು ವರ್ಷಗಳ ಕಾಲ ಶಾಸಕರಾಗಿ ಅಧಿಕಾರ ನಡೆಸಿದವರು ಮಾಡಲಾಗದ ಕೆಲಸವನ್ನು ಮೂರು ವರ್ಷದ ಅವಧಿಯಲ್ಲಿ ಒಂದೇ ಬಾರಿಗೆ ಮಾಡಲು ಸಾಧ್ಯವೇ, ಈ ಹಿಂದೆ ಆಡಳಿತ ನಡೆಸಿದವರನ್ನು ಅಭಿವೃದ್ಧಿ ವಿಚಾರದಲ್ಲಿ ಸಾರ್ವಜನಿಕರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳದ ಕಾರಣ ತಾಲ್ಲೂಕು ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿದೆ, ತಾಲ್ಲೂಕಿನ ಯಾವುದೇ ಗ್ರಾಮಗಳಿಗೆ ಭೇಟಿ ನೀಡಿದರು ಮೂಲಭೂತ ಸೌಕರ್ಯಗಳ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ, ವಿಪಕ್ಷ ಶಾಸಕನಾಗಿದ್ದರೂ ತಾಲ್ಲೂಕಿನ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಸಚಿವರ ಬಳಿ ಹೋಗಿ ಮನವಿ ಮಾಡಿಕೊಂಡು ಅನುದಾನ ಮಂಜೂರು ಮಾಡಿಸಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ, ಅಲ್ಪಸಂಖ್ಯಾತರು ವಾಸಿಸುವ ಗ್ರಾಮಗಳಿಗೂ ಸಹ ಹೆಚ್ಚು ಅನುದಾನ ನೀಡಿದ್ದು ಯಾವುದೇ ವರ್ಗದ ಜನರನ್ನು ತಾರತಮ್ಯ ಮಾಡದೆ ಯಾವುದೇ ವರ್ಗದ ಜನರನ್ನು ತಾರತಮ್ಯ ಮಾಡದೇ ಅನುದಾನ ನೀಡುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭ ದೊಡ್ಡಬೇಲಾಳು ಗ್ರಾ.ಪಂ ಅಧ್ಯಕ್ಷೆ ಆಸಿಯಾ ಖಾನಂ, ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಜವೇರಿಯಾ, ಮುಖಂಡರಾದ ಅಬ್ಬಾಸ್, ಗೌಸ್ ಖಾನ್, ಸಲ್ಮಾನ್, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಆರ್ ಡಬ್ಲ್ಯುಎಸ್ ಎಇಇ ಶಿವಕುಮಾರ್, ತಾ.ಪಂ ಸಹಾಯಕ ನಿರ್ದೇಶಕ ರಘುನಾಥ್, ಬಿಇಒ ವೈ.ಕೆ ತಿಮ್ಮೇಗೌಡ, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಚೆಸ್ಕಾಂ ಎಇಇ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.
ಈ ಸಂದರ್ಭ ದೊಡ್ಡಬೇಲಾಳು ಗ್ರಾ.ಪಂ ಅಧ್ಯಕ್ಷೆ ಆಸಿಯಾ ಖಾನಂ, ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಜವೇರಿಯಾ, ಮುಖಂಡರಾದ ಅಬ್ಬಾಸ್, ಗೌಸ್ ಖಾನ್, ಸಲ್ಮಾನ್, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಆರ್ ಡಬ್ಲ್ಯುಎಸ್ ಎಇಇ ಶಿವಕುಮಾರ್, ತಾ.ಪಂ ಸಹಾಯಕ ನಿರ್ದೇಶಕ ರಘುನಾಥ್, ಬಿಇಒ ವೈ.ಕೆ ತಿಮ್ಮೇಗೌಡ, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಚೆಸ್ಕಾಂ ಎಇಇ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು