
ತಾಲೂಕಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಕೋರೋಣ ಭೀತಿ ಎದುರಾಗಿದೆ ಎಂದು ಶಾಸಕ ಕೆ ಮಹದೇವ್ ಅಸಮಾಧಾನ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಸೋಂಕಿತರ ಆರೋಗ್ಯ ಪರಿಸ್ಥಿತಿಯನ್ನು ಗಮನಿಸಿ ಅವರನ್ನು ತಕ್ಷಣ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೆ ಪೊಲೀಸರ ಸಹಾಯವನ್ನು ಪಡೆದು ಆದ್ಯತೆಯ ಮೇರೆಗೆ ಸೋಂಕಿತರನ್ನು ದಾಖಲಿಸುವ ಅಗತ್ಯ ಇದೆ ಇದಕ್ಕೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗ್ರಾಮಲೆಕ್ಕಿಗರನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ನಂತರ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಕುಮಾರ್ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಮೂಲಭೂತ ಸೌಕರ್ಯ ಕ್ಕೆ ಯಾವುದೇ ಸಮಸ್ಯೆಗಳಿಲ್ಲ ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೇರಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಎಲ್ಲಾ ನೋಡಲ್ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಕೆ ಚಂದ್ರಮೌಳಿ, ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಶರತ್ ಬಾಬು ಹಾಗೂ ಎಲ್ಲಾ ನೋಡಲ್ ಅಧಿಕಾರಿಗಳು ಹಾಜರಿದ್ದರು.