
ಸಿದ್ಧಾರ್ಥ ಸೇವಾ ಟ್ರಸ್ಟ್ ಮೂಲಕ ಪಟ್ಟಣದ ಪೌರಕಾರ್ಮಿಕರಿಗೆ ಸ್ಟೀಮರ್ ಮಿಷಿನ್ ಕೊಡುಗೆಯಾಗಿ ನೀಡಿ ಮಾತನಾಡಿದ ಶಾಸಕರು ಕೋರೋನ ಸಂಕಷ್ಟದ ಕಾಲದಲ್ಲಿ ತಮ್ಮ ಜೀವನದ ಹಂಗು ತೊರೆದು ಪೌರಕಾರ್ಮಿಕರು ಸ್ವಚ್ಛತಾ ಕೆಲಸದಲ್ಲಿ ತೊಡಗಿದ್ದಾರೆ ಇಂತಹವರ ಆರೋಗ್ಯರಕ್ಷಣೆ ಎಲ್ಲರ ಹೊಣೆಯಾಗಿದೆ ಹಬೆ ತೆಗೆದುಕೊಳ್ಳುವುದರಿಂದ ಕೋರೋನ ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ ಎಂಬುದು ಎಲ್ಲರ ಅರಿವಿಗೆ ಬಂದಿದ್ದು ಪೌರಕಾರ್ಮಿಕರು ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ಸಿದ್ಧಾರ್ಥ ಸೇವಾ ಟ್ರಸ್ಟ್ ಹಿಂದೆ ಅನೇಕ ಬಡವರಿಗೆ ಪಡಿತರ ಕಿಟ್ ನೀಡಿತ್ತು ಈ ಬಾರಿ ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಮುಂದಾಗಿರುವುದು ಅಭಿನಂದನಾರ್ಹ ಸಂಗತಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭಾ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಸ್ಟೀಮರ್ ಯಂತ್ರವನ್ನು ಉಚಿತವಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಿದ್ಧಾರ್ಥ ಸೇವಾ ಟ್ರಸ್ಟ್ ಅಧ್ಯಕ್ಷ ಕಾಂತರಾಜು, ಕಾರ್ಯದರ್ಶಿ ಸುಧಾ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸೋಮಶೇಖರ್, ಎ ಟಿ ರಂಗಸ್ವಾಮಿ, ರಾಜ್ಯ ಸಫಾಯಿ ಕರ್ಮಚಾರಿ ಮಂಡಳಿ ನಿರ್ದೇಶಕ ಹೆಚ್ ಕೆ ಮಹೇಶ್, ತಹಸಿಲ್ದಾರ್ ಕೆ ಚಂದ್ರಮೌಳಿ ತಾಲೂಕು ಪಂಚಾಯಿತಿ ಇ ಒ ಕೃಷ್ಣಕುಮಾರ್, ಪುರಸಭೆ ಹೆಲ್ತ್ ಇನ್ಸ್ಪೆಕ್ಟರ್ ಗಳಾದ ಆದರ್ಶ ಪ್ರದೀಪ್, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಮಹೇಶ್, ಮುಖಂಡರಾದ ಅಣ್ಣಯ್ಯ ಶೆಟ್ಟಿ, ಹೊನ್ನೂರಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು