ತಾಲ್ಲೂಕಿನ ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ಗೃಹರಕ್ಷಕ ಸಿಬ್ಬಂದಿ ಗಳಿಗೆ ತಾಲ್ಲೂಕು ಆಡಳಿತ ವತಿಯಿಂದ MLA K.Mahadev ಅವರು ಆಹಾರ ಕಿಟ್ ಗಳನ್ನು ವಿತರಿಸಿದರು. 19/06/2021

ಪಟ್ಟಣದ ಪ್ರವಾಸಿ ಮಂದಿರ ಬಳಿ ಆಹಾರ ಕಿಟ್ ಗಳನ್ನು ವಿತರಿಸಿ ಶಾಸಕ ಕೆ.ಮಹದೇವ್ ಅವರು ಮಾತನಾಡಿ ಕೊರೊನಾ ಸಂಕಷ್ಟ ಕಾಲದಲ್ಲಿಯೂ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆ ಸಿಬ್ಬಂದಿ ಮತ್ತು ಕಾರ್ಯಕರ್ತರಿಗೆ ತಾಲ್ಲೂಕು ಆಡಳಿತ ವತಿಯಿಂದ ಕೈಲಾದ ಸಹಾಯ ಮಾಡುವ ನಿಟ್ಟಿನಲ್ಲಿ ಆಹಾರ ಕಿಟ್ ಗಳನ್ನು ವಿತರಿಸಲಾಗಿದೆ, ತಾಲ್ಲೂಕಿನಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರವು ಅಗತ್ಯವಿದ್ದು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸುವಂತೆ ಕೋರಿದರು.

ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್ ಅವರು ಮಾತನಾಡಿ ತಾಲ್ಲೂಕು ಆಡಳಿತ ಮತ್ತು ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ಸಂಕಷ್ಟದಲ್ಲಿರುವ ವಿವಿಧ ವರ್ಗದ ಜನರಿಗೆ ಆಹಾರ ಕಿಟ್ ಗಳನ್ನು ವಿತರಿಸಿದ್ದು ಕೊರೊನಾ ಸೋಂಕು ತಡೆಗಟ್ಟಲು ಶ್ರಮಿಸುತ್ತಿರುವವರ ಜೊತೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕೋರಿದರು.

ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು, ಕೊಪ್ಪ ಗ್ರಾ.ಪಂ ಅಧ್ಯಕ್ಷ ರೇಣುಕಾಸ್ವಾಮಿ, ಎಂಆರ್ ಡಬ್ಲ್ಯೂ ಅಧಿಕಾರಿ ಲಕ್ಷ್ಮಿ, ಗೃಹರಕ್ಷಕ ಸಿಬ್ಬಂದಿ ಅಧಿಕಾರಿ ರೇವಣ್ಣ, ಜಿ.ಪಂ ಎಇಇ ಮಂಜುನಾಥ್, ಪಿಡಬ್ಲ್ಯುಡಿ ಎಇಇ ಜಯಂತ್, ಉದ್ಯಮಿ ಅನ್ಸರ್ ಮತ್ತಿತರರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top