
ಶಾಸಕ ಕೆ ಮಹದೇವ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕು ಹರಡುತ್ತಿರುವುದನ್ನು ತಡೆಗಟ್ಟಲು ನಗರವ್ಯಾಪ್ತಿಯಲ್ಲಿ COVID ಪರೀಕ್ಷೆಯನ್ನು ಮಾಡಿಸಲು ತಂಡಗಳನ್ನು ರಚಿಸಲಾಗಿದೆ, ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳು ಕೋವಿಡ್ ಟೆಸ್ಟ್ ಯಥೇಚ್ಛವಾಗಿ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ತಹಸಿಲ್ದಾರ್ ಕೆ ಚಂದ್ರಮೌಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ. ಆರ್ ಕೃಷ್ಣಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಶರತ್ ಬಾಬು, ತಾಲೂಕು ಆಸ್ಪತ್ರೆ ಆಡಳಿತ ಅಧಿಕಾರಿ ಶ್ರೀನಿವಾಸ್, ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಹಾಗೂ ತಾಲೂಕಿನ ನೋಡಲ್ ಅಧಿಕಾರಿಗಳು ಹಾಜರಿದ್ದರು.