ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಡಾ. ಬಾಬು ಜಗಜೀವನ ರಾಮ್ ಪುಣ್ಯಸ್ಮರಣೆ ಕಾರ್ಯಕ್ರಮ 06/07/2021

ಪಿರಿಯಾಪಟ್ಟಣ: ಡಾ.ಬಾಬು ಜಗಜೀವನ ರಾಮ್ ಅವರ ಹೋರಾಟದ ಬದುಕು ಮತ್ತು ಸಾಧನೆ ನಮ್ಮೆಲ್ಲರಿಗೂ ಅನುಕರಣೀಯ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಡಾ. ಬಾಬು ಜಗಜೀವನ ರಾಮ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಅವರು ಮಾತನಾಡಿದರು, ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಮ್ ರವರು ದಲಿತ ವರ್ಗದವರಿಗೆ ಮಾತ್ರ ಸೀಮಿತವಾಗದೆ ಎಲ್ಲಾ ವರ್ಗಗಳಲ್ಲಿ ಹಿಂದುಳಿದವರ ಶ್ರೇಯೋಭಿವೃದ್ಧಿಗೆ ತಮ್ಮ ಜೀವನ ಮುಡುಪಾಗಿಟ್ಟು ಶ್ರಮಿಸಿದವರು, ಅಂತಹ ಮಹಾನ್ ಸಾಧಕರ ಜೀವನದ ಮೌಲ್ಯಗಳನ್ನು ನಾವು ಅನುಸರಿಸಬೇಕಿದೆ ಎಂದರು.

ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎನ್.ಆರ್ ಕಾಂತರಾಜು ಪ್ರಧಾನ ಭಾಷಣಕಾರರಾಗಿ ಮಾತನಾಡಿ ಅಂಬೇಡ್ಕರ್ ಮತ್ತು ಜಗಜೀವನ ರಾಮ್ ರವರು ದಲಿತ ವರ್ಗಗಳ ಎರಡು ಕಣ್ಣುಗಳಿದ್ದಂತೆ, ಜಗಜೀವನ ರಾಮ್ ರವರು ಅಸ್ಪೃಶ್ಯ ಸಮಾಜದ ಒಬ್ಬ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ ಸಾಧಿಸಿದ ಕೀರ್ತಿ ಅಪಾರ, ವಿದ್ಯಾರ್ಥಿ ಜೀವನದಲ್ಲಿ ಸಂಘಟನೆಯಲ್ಲಿ ತೊಡಗಿದ್ದವರು ಗಾಂಧೀಜಿಯವರ ಪ್ರೇರಣೆಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ನಂತರ 36ನೇ ವಯಸ್ಸಿಗೆ ಸಂಸದರಾಗಿ ಆಯ್ಕೆಯಾಗಿ ಸತತ 50 ವರ್ಷಗಳ ಸುದೀರ್ಘ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು, ಬರಗಾಲದಂತಹ ಪರಿಸ್ಥಿತಿಯಲ್ಲಿ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅವರು ಹಸಿರು ಕ್ರಾಂತಿಯ ಹರಿಕಾರ ಎಂದು ಬಣ್ಣಿಸುವಷ್ಟು ಮಹತ್ತರ ಸಾಧನೆಗೈದವರು, ಸಾಧಕರಿಗೆ ಸಾವು ಇದ್ದರೂ ಅವರು ಈ ನಾಡಿಗೆ ನೀಡಿದ ಕೊಡುಗೆಗಳಿಗೆ ಸಾವಿಲ್ಲ ಎಂದರು.

ತಹಸೀಲ್ದಾರ್ ಕೆ.ಚಂದ್ರಮೌಳಿ ಮಾತನಾಡಿ ಯಾವುದೇ ಸಾಧಕರನ್ನು ಜಾತಿ ಜನಾಂಗಕ್ಕೆ ಸೀಮಿತಗೊಳಿಸದೆ ಅವರ ಸಾಧನೆಗಳನ್ನು ಮಾತ್ರ ಅರಿವಂತಾಗಬೇಕು ಎಂದರು.

ಸಭೆಯಲ್ಲಿ ತಾ.ಪಂ ಇಒ ಕೃಷ್ಣಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಎಡಿಎಲ್ ಆರ್ ಚಿಕ್ಕಣ್ಣ, ಸಿಡಿಪಿಒ ಕುಮಾರ್, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಜಿ.ಪಂ ಮಾಜಿ ಸದಸ್ಯರಾದ ಕೆ.ಎಸ್ ಮಂಜುನಾಥ್, ಜಯಕುಮಾರ್, ತಾ.ಪಂ ಮಾಜಿ ಸದಸ್ಯ ಟಿ.ಈರಯ್ಯ, ಆದಿಜಾಂಬವ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಶಿವಣ್ಣ, ಮುಖಂಡರಾದ ಸೋಮಶೇಖರ್, ನರಸಿಂಹ, ಕುಮಾರ್,
ಪಿ.ಮಹದೇವ್, ನಾಗರಾಜ್, ಭೀಮ್ ಆರ್ಮಿ ಸಂಘಟನೆ ತಾಲ್ಲೂಕು ಅಧ್ಯಕ್ಷ ಗಿರೀಶ್, ರಾಜಯ್ಯ, ವೆಂಕಟೇಶ್, ವಾಜಿದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಮತ್ತು ಸಮಾಜದ ಮುಖಂಡರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top