
ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಹಲವು ವಿಷಯಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಸಭೆಯಲ್ಲಿ ಶಾಸಕರುಗಳಾದ ಕೆ.ಮಹದೇವ್, ಸಾ.ರಾ ಮಹೇಶ್, ಅಶ್ವಿನ್ ಕುಮಾರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.