
ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಆರ್ಥಿಕ ಸದೃಢತೆಗೆ ಸಹಕರಿಸಬೇಕು ಎಂದು ಶಾಸಕ ಕೆ ಮಹದೇವ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರಿಗೆ ಆಹಾರ ವಿತರಿಸಿ ಮಾತನಾಡಿದ ಅವರು ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರವು ಅನುದಾನವನ್ನು ಮೀಸಲಿಟ್ಟಿದೆ ಇದರಲ್ಲಿ ಈಗಾಗಲೇ ಕಾರ್ಮಿಕರ ಖಾತೆಗೆ ಮೂರು ಸಾವಿರ ರೂ ಜಮಾ ಮಾಡಲಾಗಿದೆ ಇದರ ಜೊತೆಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ ಇದಲ್ಲದೆ ಕಾರ್ಮಿಕರಿಗೆ ವಿದ್ಯಾಭ್ಯಾಸಕ್ಕಾಗಿ ವಿವಾಹಕ್ಕಾಗಿ ನಿರ್ಮಾಣಕ್ಕಾಗಿ ಹೀಗೆ ಇತರ ಅನುಕೂಲವಾಗುವ ಯೋಜನೆಗಳನ್ನು ಜಾರಿಗೊಳಿಸಿದೆ ಇಂತಹ ಮಹತ್ತರವಾದ ಯೋಜನೆಗಳ ಬಗ್ಗೆ ಕಾರ್ಮಿಕರಿಗೆ ಅರಿವು ಮೂಡಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಕೋರೋನ ಸಂಕಷ್ಟದಲ್ಲಿ ಸರ್ಕಾರವು ಪ್ರತಿಯೊಬ್ಬರಿಗೂ ನೆರವನ್ನು ನೀಡುತ್ತಿದೆ ಇದನ್ನು ಪ್ರತಿಯೊಬ್ಬರು ಮನವರಿಕೆ ಮಾಡಿಕೊಳ್ಳಬೇಕು ನೋಂದಣಿ ಮಾಡಿಸಿಕೊಳ್ಳದ ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಆಗ ಮಾತ್ರ ಸವಲತ್ತುಗಳನ್ನು ಪಡೆಯಲು ಸಾಧ್ಯ ಆದ್ದರಿಂದ ಕಾರ್ಮಿಕರು ಯಾವುದೇ ಸಂದರ್ಭದಲ್ಲಿಯೂ ಧೃತಿಗೆಡದೆ ಜೀವನದಲ್ಲಿ ಸದೃಢತೆ ಹೊಂದಲು ಮುಂದಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿ ಗಂಗಾಧರ್ ಭಾಸ್ಕರ್ ಮತ್ತಿತರರು ಹಾಜರಿದ್ದರು