
ಪಿರಿಯಾಪಟ್ಟಣ: ನಿಗದಿಯಂತೆ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು ತಾಲ್ಲೂಕಿನ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದೆ ಪರೀಕ್ಷೆ ಎದುರಿಸಲು ಸಿದ್ಧರಾಗಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಿಕ್ಷಣ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿ ಬಿಡುಗಡೆ ಮಾಡಲಾಗಿ ಜುಲೈ ಮೂರನೆ ವಾರದಲ್ಲಿ ಎರಡು ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮಾಡಿ ಮುಗಿಸಬೇಕು ಎಂದು ಸರ್ಕಾರ ಆದೇಶಸಿದ್ದು, ಈ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆ ಪರೀಕ್ಷಾ ಸಿದ್ದತೆಗಳನ್ನು ನಿಗದಿಪಡಿಸಿರುವ ದಿನಾಂಕದAದೇ ನಡೆಸಲಾಗುತ್ತದೆ. ಆದ್ದರಿಂದ ಅಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಸುರಕ್ಷತೆ ಕಾಪಾಡುವ ಮೂಲಕ ಮಕ್ಕಳು ಯಾವುದೇ ಸಂಶಯವಿಲ್ಲದೆ ಪರೀಕ್ಷೆ ಎದುರಿಸಲು ಅನುವು ಮಾಡಿಕೊಡಬೇಕು ಎಂದರು.
ಎಸ್ಎಸ್ಎಲ್ಸಿ ಮಕ್ಕಳೊಂದಿಗೆ ಶಾಸಕರ ಮಾತುಕತೆ:
ಸೋಮವಾರ ತಾ.ಪಂ.ಸಭಾ0ಗ0ದಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಶಾಸಕ ಕೆ.ಮಹದೇವ್ ದೂರವಾಣಿ ಮೂಲಕ ಮಾತನಾಡಿ ಏನಪ್ಪಾ, ಏನಮ್ಮಾ ಹೇಗೆ ಓದ್ತಾ ಇದ್ದೀಯಾ, ಏನ್ ಓದ್ತಾ ಇದೀಯಾ, ಪರೀಕ್ಷೆಗೆ ರೆಡಿ ಇದ್ದೀರಾ, ಸ್ಟಡಿ ಹಾಲಿಡೇಸ್ ಹೇಗೆ ಕಳೆಯುತ್ತಿದ್ದೀರಿ, ಮಾಸ್ಕ್ ಹಾಕಿಕೊಂಡಿದ್ದೀರಾ, ಪರೀಕ್ಷೆಗೆ ಸಜ್ಜಾಗಿದ್ದೀರಾ ಎಂದು ಪ್ರಶ್ನಿಸಿ ಮಕ್ಕಳಿಂದ ಅಭಿಪ್ರಾಯಗಳನ್ನು ಪಡೆದುಕೊಂಡ ಅವರು, ತಾವುಗಳು ಯಾವುದೇ ಭಯ ಮತ್ತು ಆತಂಕಕ್ಕೆ ಒಳಗಾಗದೇ ಧೈರ್ಯವಾಗಿ ಪರೀಕ್ಷೆಯನ್ನು ಎದುರಿಸುವಂತೆ ಹುರಿದುಂಬಿಸಿದರಲ್ಲದೆ, ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳ ಬಗ್ಗೆ ಶಿಕ್ಷಕರಿಗೆ ಕರೆ ಮಾಡಿ ತಿಳಿದುಕೊಳ್ಳುವಂತೆ ಕಿವಿ ಮಾತು ಹೇಳಿ ಪರೀಕ್ಷೆ ಮುಂದಕ್ಕೆ ಹೋಗಿದ್ದರಿಂದ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಮ್ಮೇಗೌಡ ಮಾತನಾಡಿ 3068 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ತಾಲ್ಲೂಕಿನಲ್ಲಿ ಪರೀಕ್ಷೆಗಾಗಿ 19
ಕೇಂದ್ರಗಳನ್ನು ತೆರೆಯಲಾಗಿದೆ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನೀಂಗ್ ಮಾಡಲಾಗುವುದು.
ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಈಗಾಗಲೇ ಮಾರ್ಗದರ್ಶನ ಹಾಗೂ ಪಠ್ಯಕ್ಕೆ ಸಂಬAಧಿಸಿದ ಸಮಸ್ಯೆಗಳ ಕುರಿತಾಗಿ ಶಿಕ್ಷಣ ಇಲಾಖೆಯಿಂದ ಬ್ಲಾಗ್ ರಚಿಸಿ ನಮ್ಮ ಶಿಕ್ಷಕ ವೃಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಅಗತ್ಯವಾದ ವಿಷಯವಾರು ಸಂಪನ್ಮೂಲ ವ್ಯಕ್ತಿಗಳನ್ನು ನೇಮಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಿಷಯವಾರು ಶಿಕ್ಷಕರ ಮೊಬೈಲ್ ಸಂಖ್ಯೆ ನೀಡಲಾಗಿದ್ದು, ವಿದ್ಯಾರ್ಥಿಗಳು ಗೊಂದಲವಿರುವ ವಿಷಯಗಳು, ಹೊಸ ಪರೀಕ್ಷಾ ವಿಧಾನ, ಬಹು ಆಯ್ಕೆ ಪ್ರಶ್ನೆಗಳಿಗೆ ಉತ್ತರಿಸುವ ರೀತಿ ಸಂಬAಧ ಆಯಾ ಸಂಪನ್ಮೂಲ ವ್ಯಕ್ತಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರ ಗಣೇಶ್, ಸೋಮಶೇಖರ್, ಸತೀಶ್ ಕುಮಾರ್, ಶಿಕ್ಷರಾದ ಶಿವರಾಜ್, ಶಶಿಭೂಷಣ್, ಜಯಕುಮಾರ್, ಮೇರಿ, ನಿಶಾ, ಶಿವಕುಮಾರ್, ಸ್ವಾಮಿ,ಬಿಐಇಆರ್ಟಿ ಪುಟ್ಟರಾಜು ಸೇರಿದಂತೆ ಇತರರು ಹಾಜರಿದ್ದರು.