
ಪಟ್ಟಣದ ಕನ್ನಂಬಾಡಿಯಮ್ಮ ದೇವಾಲಯ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ಮಹದೇವ್ ಅವರು ರೈತರು ಕೃಷಿ ಇಲಾಖೆಯಿಂದ ಮಾಹಿತಿ ಹಾಗೂ ಸವಲತ್ತು ಪಡೆಯಲು ನಗರ ಪ್ರದೇಶಗಳಿಗೆ ಆಗಮಿಸುವುದನ್ನು ತಪ್ಪಿಸುವ ಉದ್ದೇಶದಿಂದ ಕೃಷಿ ಹಾಗೂ ಕೃಷಿಗೆ ಸಂಬAಧಿಸಿದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮ ಹಮ್ಮಿಕೊಂಡಿರುವುದರಿ0ದ ರೈತರಿಗೆ ಸಮಯ ಉಳಿದು ಸಕಾಲಕ್ಕೆ ಮಾಹಿತಿ ದೊರೆಯುವಂತಾಗಿದೆ, ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿ ಪದ್ಧತಿಯಲ್ಲಿ ಹೊಸ ಆವಿಷ್ಕಾರಗಳನ್ನು ಪರಿಚಯಿಸುತ್ತಿರುವ ಸರ್ಕಾರದ ಕ್ರಮ ಸದ್ಬಳಕೆಯಾಗಿ ಎಲ್ಲ ರೈತರಿಗೂ ಮಾಹಿತಿ ದೊರೆಯುವಂತಾಗಲಿ, ಕೃಷಿ ಇಲಾಖೆಗೆ ಸಂಬ0ಧಿಸಿದ0ತೆ ಸರ್ಕಾರದಿಂದ ದೊರೆಯುವ ಸವಲತ್ತುಗಳಿಗೆ ತಾಲ್ಲೂಕಿನಿಂದ ಎಷ್ಟೇ ಅರ್ಜಿಗಳು ಬಂದರೂ ಅವುಗಳನ್ನು ಪರಿಗಣಿಸಿ ಸವಲತ್ತು ದೊರೆಯಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಮಾತನಾಡಿ ಕೃಷಿ ಇಲಾಖೆ ಸೇರಿದಂತೆ ರೈತರಿಗೆ ಅನುಕೂಲವಾಗುವ ಪಶುಸಂಗೋಪನೆ, ಅರಣ್ಯ, ಮೀನುಗಾರಿಕೆ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಮಾಹಿತಿ ಹಾಗೂ ಸವಲತ್ತುಗಳನ್ನು ರೈತರಿದ್ದ ಸ್ಥಳಗಳಲ್ಲಿಯೇ ನೀಡುವ ಉದ್ದೇಶದಿಂದ ಸಮಗ್ರ ಕೃಷಿ ಅಭಿಯಾನ ಯೋಜನೆಯಡಿ ಪ್ರಚಾರ ರಥಕ್ಕೆ ಚಾಲನೆ ನೀಡಲಾಗಿದೆ ಎಂದರು.

ಇದೇ ವೇಳೆ ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ತಾಲ್ಲೂಕಿನ 10 ರೈತ ಕುಟುಂಬಗಳಿಗೆ ಸರ್ಕಾರದಿಂದ ದೊರೆಯುವ ಪರಿಹಾರದ ಆದೇಶ ಪತ್ರವನ್ನು ಶಾಸಕರು ವಿತರಿಸಿದರು.
ಈ ಸಂದರ್ಭ ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಪುರಸಭೆ ಅಧ್ಯಕ್ಷ ಮಂಜುನಾಥ್ ಸಿಂಗ್, ಮಾಜಿ ಅಧ್ಯಕ್ಷ ತಿಮ್ಮನಾಯಕ, ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಜಿ.ಪಂ ಮಾಜಿ ಸದಸ್ಯ ಜಯಕುಮಾರ್, ತಾ.ಪಂ ಮಾಜಿ ಸದಸ್ಯರಾದ ಎಸ್.ರಾಮು, ಟಿ.ಈರಯ್ಯ, ಮಲ್ಲಿಕಾರ್ಜುನ, ಕೃಷಿ ಅಧಿಕಾರಿಗಳಾದ ಮಹೇಶ್, ಹಿತೇಶ್, ವಿಕಾಸ್ ಮತ್ತು ಸಿಬ್ಬಂದಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವರಂಜನ್, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿ ವಿನೋದ್ ಗೌಡ, ಜಿ.ಪಂ ಎಇಇ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.