
ಇಂದು ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗು ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿಯವರ ನೇತೃತ್ವದಲ್ಲಿ ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಉಪಸ್ಥಿತಿಯಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯ ಮೂಲಕ ತೆರಳಿ “ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಮಹದಾಯಿ ಯೋಜನೆಯ ಅನುಮೋದನೆಗಾಗಿ” ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಯಿತು.