ಶಾಸಕ ಕೆ.ಮಹದೇವ್ ಅವರಿಂದ 6.22 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ 02/08/2021

ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಗ್ರಾಮದಲ್ಲಿ 1.58 ಕೋಟಿ ವೆಚ್ಚದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಾಲನೆ ಹಾಗೂ ಬೆಟ್ಟದಪುರ ಗ್ರಾಮದಲ್ಲಿ 3 ಕೋಟಿ ವೆಚ್ಚದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಬೀದಿದೀಪ ಅಳವಡಿಸುವ ಕಾಮಗಾರಿ ಮತ್ತು ಬೆಟ್ಟದಪುರ ಗ್ರಾ.ಪಂ ವತಿಯಿಂದ 1.64 ಕೋಟಿ ವೆಚ್ಚದಲ್ಲಿ ಸರ್ವೋದಯ ಗ್ರಾಮ ಪರಿಕಲ್ಪನೆಯಡಿಯ ವಿವಿಧ ಕಾಮಗಾರಿ ಸೇರಿದಂತೆ ಒಟ್ಟು 6.22 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಮಹದೇವ್ ಅವರು ಸೋಮವಾರ ಚಾಲನೆ ನೀಡಿದರು.

ಈ ವೇಳೆ ಶಾಸಕರು ಮಾತನಾಡಿ ಗ್ರಾಮಸ್ಥರು ಮೂಲಭೂತ ಸೌಕರ್ಯ ಸಮಸ್ಯೆಗಳ ಅಹವಾಲು ಸಲ್ಲಿಸಿದಾಗ ಅವುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಸಚಿವರ ಮೂಲಕ ಸರ್ಕಾರಕ್ಕೆ ಒತ್ತಡ ತಂದು ಅನುದಾನ ಮಂಜೂರು ಮಾಡಿಸಲು ಅವಿರತ ಪ್ರಯತ್ನ ಮಾಡಿ ತಾಲ್ಲೂಕಿನ ಅಭಿವೃದ್ಧಿ ದೃಷ್ಟಿಯಿಂದ ವಿಪಕ್ಷ ಶಾಸಕನಾಗಿದ್ದರೂ ಮುಖ್ಯಮಂತ್ರಿ ಹಾಗೂ ಸಚಿವರುಗಳ ಉತ್ತಮ ಒಡನಾಟದೊಂದಿಗೆ ಕಾಮಗಾರಿಗಳಿಗೆ ಹಣ ಮಂಜೂರು ಮಾಡಿಸುತ್ತಿದ್ದೇನೆ, 2 ಬಾರಿ ಚುನಾವಣೆಯಲ್ಲಿ ಸೋತ ಸಂದರ್ಭ ರಾಜಕೀಯವೇ ಸಾಕು ಎಂದು ಕುಳಿತಿದ್ದಾಗ ಪತ್ನಿ, ಮಕ್ಕಳು ಮತ್ತು ತಾಲ್ಲೂಕಿನ ನಿಷ್ಟಾವಂತ ಕಾರ್ಯಕರ್ತರ ಒತ್ತಾಸೆಯ ಮೇರೆಗೆ 3ನೇ ಬಾರಿ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಈ ಹಿಂದಿನ ಜನಪ್ರತಿನಿಧಿಗಳ ಅಭಿವೃದ್ಧಿ ವಿಷಯದ ನಿರ್ಲಕ್ಷ್ಯತನದಿಂದಾಗಿ ಯಾವುದೇ ಗ್ರಾಮಕ್ಕೆ ಭೇಟಿ ನೀಡಿದರೂ ಸಮಸ್ಯೆಗಳ ಸರಮಾಲೆಗಳೇ ಎದ್ದುಕಾಣುತ್ತಿವೆ ಒಂದೇ ಬಾರಿಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಹಂತ ಹಂತವಾಗಿ ಮುಂದಿನ ದಿನಗಳಲ್ಲಿ ಬಗೆಹರಿಸುವುದಾಗಿ ತಿಳಿಸಿದರು.

ಕೆಡಬ್ಲ್ಯುಎಸ್ಎಸ್ ಬಿ ನಾಮನಿರ್ದೇಶಿತ ಸದಸ್ಯ  ಆರ್.ಟಿ ಸತೀಶ್ ರಾವಂದೂರು ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿ ವಿಪಕ್ಷ ಶಾಸಕರಾಗಿದ್ದರೂ ತಾಲ್ಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಹಾಗೂ ಎಲ್ಲಾ ಸಚಿವರೊಂದಿಗಿನ ಉತ್ತಮ ಒಡನಾಟದಿಂದ ಅನುದಾನ ಮಂಜೂರು ಮಾಡಿಸುತ್ತಿರುವ ಶಾಸಕ ಕೆ.ಮಹದೇವ್ ಅವರ ಕಾರ್ಯ ಶ್ಲಾಘನೀಯ, ಮುಂದಿನ ದಿನಗಳಲ್ಲಿ ರಾವಂದೂರು ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸುವ ನಿಟ್ಟಿನಲ್ಲಿ ಇಬ್ಬರೂ ಒಟ್ಟಿಗೆ ಸೇರಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ ಅವರು ಬೆಟ್ಟದಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿ ತಾಲ್ಲೂಕನ್ನು ಹಲವು ವರ್ಷಗಳಿಂದ ಆಳಿದ ಜನಪ್ರತಿನಿಧಿಗಳು ಮಾಡದ ಕೆಲಸವನ್ನು ಶಾಸಕ ಕೆ.ಮಹದೇವ್ ಅವರು ಕೇವಲ ಮೂರೇ ವರ್ಷದಲ್ಲಿ ಮಾಡಿ ತೋರಿಸಿ ಜನಪರ ಆಡಳಿತ ನೀಡುತ್ತಿದ್ದು ಮತದಾರರು ಮುಂದಿನ ದಿನಗಳಲ್ಲಿಯೂ ಅವರನ್ನು ಬೆಂಬಲಿಸಿ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕೆಂದು ಕೋರಿ ಬೆಟ್ಟದಪುರ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಾಗರಿಕರ ಪರವಾಗಿ ಒತ್ತಾಯಿಸಿದರು.

ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಸ್.ರಾಮು ಮಾತನಾಡಿ ತಾಲ್ಲೂಕಿನಾದ್ಯಂತ ಹಂತಹಂತವಾಗಿ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯವಾದುದು, ಮುಂದಿನ ದಿನಗಳಲ್ಲಿಯೂ ಇವರ ಅಧಿಕಾರದ ಅವಧಿಯಲ್ಲಿ ಮತ್ತಷ್ಟು ಯೋಜನೆಗಳು ತಾಲ್ಲೂಕಿಗೆ ಸಿಗಲಿ ಎಂದರು.

ಈ ಸಂದರ್ಭ ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ರವರು ಮಾತನಾಡಿದರು

 ಈ ಸಂದರ್ಭ ಜಿ.ಪಂ ಮಾಜಿ ಸದಸ್ಯರಾದ ಕೆ.ಎಸ್ ಮಂಜುನಾಥ್, ಶಿವಣ್ಣ, ತಾ.ಪಂ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ್,  ಮೋಹನ್ ರಾಜ್, ಶಂಕರೇಗೌಡ, ರಾವಂದೂರು ಗ್ರಾ.ಪಂ ಅಧ್ಯಕ್ಷ ವಿಜಯ ಕುಮಾರ್, ಉಪಾಧ್ಯಕ್ಷೆ ನೇತ್ರಾವತಿ, ಬೆಟ್ಟದಪುರ ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಸೌಮ್ಯಾ, ಎಪಿಎಂಸಿ ನಿರ್ದೇಶಕಿ ಸರ್ವಮಂಗಳ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು, ಭೂಸೇನಾ ನಿಗಮದ ಅಧಿಕಾರಿ ವಿಜಯ್, ಆರೋಗ್ಯ ಇಲಾಖೆ ಎಇಇ ದೊರೆಸ್ವಾಮಿ, ವೈದ್ಯಾಧಿಕಾರಿ ಡಾ.ಸುನೀಲ್, ಜಿ.ಪಂ ಎಇಇ ಮಂಜುನಾಥ್, ಪಿಡಬ್ಲ್ಯುಡಿ ಎಇಇ ಜಯಂತ್, ಪಶುಸಂಗೋಪನೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಬಿಇಒ ವೈ.ಕೆ ತಿಮ್ಮೇಗೌಡ, ಮುಖಂಡರಾದ ಬಿ.ಜೆ ದೇವರಾಜ್, ಅಯ್ಯರ್ ಗಿರಿ, ಆರ್.ಎಲ್ ಮಣಿ, ದೊರೆಕೆರೆ ನಾಗೇಂದ್ರ, ಪಂಚವಳ್ಳಿ ಸಂತೋಷ್, ಪೆಪ್ಸಿ ಕುಮಾರ್, ಲೋಕೇಶ್, ಬಿ.ವಿ ಗಿರೀಶ್, ಸೇರಿದಂತೆ ಸ್ಥಳೀಯ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಜನಪ್ರತಿನಿಧಿಗಳು ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top