
ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ ವ್ಯಕ್ತಿಗಳನ್ನು ಗೌರವಿಸುವುದರ ಮೂಲಕ ಸರ್ಕಾರದ ಕೋವಿಡ್ ನಿಯಮಗಳನ್ನು ಪಾಲಿಸಿ ಸರಳವಾಗಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲು ಶಾಸಕ ಕೆ. ಮಹದೇವ್ ಸೂಚಿಸಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಬೇಕಾಗಿತ್ತು ಆದರೆ ಕೋವಿಡ್ ಪರಿಣಾಮ ಸರ್ಕಾರದ ನಿಯಮಾವಳಿಗಳ ಪ್ರಕಾರ ಸರಳವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ತಾಲೂಕಿನ ಅಧಿಕಾರಿಗಳು ಹಾಜರಿರಬೇಕು ಮತ್ತು ಕೆಲವು ಇಲಾಖೆಯ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಈ ಸಂದರ್ಭದಲ್ಲಿ ಧ್ವಜವಂದನೆ ಸ್ವೀಕರಿಸಲು ಶಿಕ್ಷಕರು ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಪಥ ಸಂಚಲನ ಕಾರ್ಯಕ್ರಮ ನಡೆಸಿಕೊಡಲಾಗುವುದು ಎಂದರು
ಸಭೆಯಲ್ಲಿ ತಹಸೀಲ್ದಾರ್ ಚಂದ್ರ ಮೌಳಿ, ತಾ ಪಂ ಕಾರ್ಯನಿರ್ವಾಕಾಧಿಕಾರಿ ಕೃಷ್ಣ ಕುಮಾರ್, ಭೂ ಮಾಪನ ಇಲಾಖೆ ಚಿಕ್ಕಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುಮಾರ್, ಪುರಸಭೆ ಮುಖ್ಯಧಿಕಾರಿ ಪ್ರಸನ್ನ, ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಗೌಡ, ತಾಲ್ಲೂಕು ವೈದ್ಯಧಿಕಾರಿ ಡಾ. ಶರತ್ ಬಾಬು ಸೇರಿದಂತೆ ಇತರೆ ಇಲಾಖೆಧಿಕಾರಿಗಳು ಹಾಜರಿದ್ದರು.