
ಪಿರಿಯಾಪಟ್ಟಣ ತಾಲೂಕಿನ ಈಚುರು ಗ್ರಾಮದಲ್ಲಿ ಸುಮಾರು 10 ಲಕ್ಷ ರು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ ಮಹದೇವ್ ರವರು ಗುದ್ದಲಿ ಪೂಜೆ ನೆರವೇರಿಸಿದರು .
ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳನ್ನು ಹಂತಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು, ತಾಲೂಕಿನ 34 ಗ್ರಾಮ ಪಂಚಾಯಿತಿಗಳಲ್ಲಿ ಒಂದರಂತೆ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸರ್ವೋದಯ ಗ್ರಾಮದಲ್ಲಿ ಮಾದರಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು, ಇದೇ ವೇಳೆಯಲ್ಲಿ ಬಿಜೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮತ್ತು ಗ್ರಾಮಸ್ಥರ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು ಅಪಾಯದಂಚಿನಲ್ಲಿವೆ ಅವುಗಳನ್ನು ಅದೇ ಜಾಗದಲ್ಲಿ ಹೊಸ ಕೊಠಡಿಗಳನ್ನು ನಿರ್ಮಿಸಿಕೊಡಬೇಕೆಂದು ಶಾಸಕರಲ್ಲಿ ಗ್ರಾಮಸ್ಥರು ಮತ್ತು ಶಾಲಾ ಮುಖ್ಯ ಶಿಕ್ಷಕರು ಮನವಿ ಮಾಡಿದರು.
ಶೀಘ್ರದಲ್ಲೇ ಕೊಠಡಿಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಶಾಸಕ ಕೆ ಮಹದೇವ್ ಭರವಸೆ ನೀಡಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಶೆಟ್ಟಿ, ಗಿರೀಶ್ ಭುವನಹಳ್ಳಿ, ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ಶಂಕರ್, ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಇ ಒ ಕೃಷ್ಣಕುಮಾರ್, ಎಇಇ ಚೆಸ್ಕಾಂ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ, ಸಹಾಯಕ ಕೃಷಿ ನಿರ್ದೇಶಕ ಪ್ರಸಾದ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಕಿರಿಯ ಅಭಿಯಂತರ ಜಾಕಬ್, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಕುಮಾರ್, ಗ್ರಾಮ ಪಂಚಾಯಿತಿ ಪಿಡಿಓ ಬಸವರಾಜ್ ಲೆಕ್ಕ ಸಹಾಯಕ ಶ್ರೀನಿವಾಸ್ ಕೆಂಪೇಗೌಡ ಸ್ವಾಮಿಗೌಡ ಈಚುರು ಗ್ರಾಮಸ್ಥರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು
