
ಪಿರಿಯಾಪಟ್ಟಣ: ಶಿಕ್ಷಕ ಹುದ್ದೆಗೆ ಸಮಾಜದಲ್ಲಿ ಉನ್ನತ ಸ್ಥಾನಮಾನವಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.
ಪಟ್ಟಣದ ಪುಷ್ಪಾ ಕಾನ್ವೆಂಟ್ ನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಕೊರೊನಾ ಸೋಂಕಿನ ಹಿನ್ನೆಲೆ ಸರಳವಾಗಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಗುರುಗಳ ಆಶೀರ್ವಾದ ತಂದೆ ತಾಯಿಗಳಿಗಿಂತ ಹೆಚ್ಚಿನದಾಗಿದೆ, ಶಿಕ್ಷಕ ಹುದ್ದೆಗೆ ಸಮಾಜದಲ್ಲಿ ಉತ್ತಮ ಸ್ಥಾನ ಮಾನವಿದ್ದು ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿನದು, ತಾಲ್ಲೂಕಿನಲ್ಲಿ ಗುರುಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ ಶೀಘ್ರ ಗೊಂದಲಗಳನ್ನು ನಿವಾರಿಸಿ ಕಾಮಗಾರಿ ಪ್ರಾರಂಭಿಸುವಂತೆ ತಿಳಿಸಿದರು.
ಬಿಇಒ ವೈ.ಕೆ ತಿಮ್ಮೆಗೌಡ ಮಾತನಾಡಿ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಸ್ವಯಂ ಮೌಲ್ಯಮಾಪನ ಮಾಡಿಕೊಂಡು ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸಬೇಕು, ಶಿಕ್ಷಕ ವೃತ್ತಿಗೆ ವಿಶೇಷ ಸ್ಥಾನಮಾನ ಕಲ್ಪಿಸಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸಾಧನೆಯ ಅಂಶಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ತಿಳಿಸಿದರು.
ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ, ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಮಾತನಾಡಿದರು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮೋಹನ್ ಕುಮಾರ್, ಸಿಡಿಪಿಒ ಕುಮಾರ್, ಮುಖಂಡರಾದ ರಘುನಾಥ್, ಉಮೇಶ್, ಶಿಕ್ಷಣ ಇಲಾಖೆಯ ವಿವಿಧ ಸಂಘಗಳ ಅಧ್ಯಕ್ಷರುಗಳಾದ ರಾಮಚಂದ್ರ, ನಾಗಶೆಟ್ಟಿ, ಶಿವಮೂರ್ತಿ, ದೇವರಾಜ್, ಆರಾಧ್ಯ ಕಿಶೋರ್, ಬಿ.ವಿ ಮಂಜುನಾಥ್, ಜಗದೀಶ್, ವೆಂಕಟೇಶ್, ಸ್ಟೆರ್ಲ ಮೇರಿ, ಸುರೇಶ್, ಕ್ಷೇತ್ರ ಹಾಗೂ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಹಾಜರಿದ್ದರು.
ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಶಾಸಕ ಕೆ.ಮಹದೇವ್ ಅವರು ಸನ್ಮಾನಿಸಿ ಗೌರವಿಸಿದರು.