ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಗ್ರಾಮದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಡಿಯೋ ಕಾನ್ಪರೆನ್ಸ್ ವೀಕ್ಷಣೆ ಹಾಗೂ ರೈತರಿಗೆ ರಾಗಿ ಬೆಳೆ ಕುರಿತ ಪ್ರಾತಿಕ್ಷತೆ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ರೈತರಿಗೆ ರಾಗಿಯನ್ನು ವಿತರಿಸಿದರು. 05/09/2021

ಪಿರಿಯಾಪಟ್ಟಣ: ಭಾರತ ಸರ್ಕಾರ ರೈತ ವಿದ್ಯಾನಿಧಿ ಕಾರ್ಯಕ್ರಮದ ಮೂಲಕ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.
ತಾಲೂಕಿನ ಹುಣಸವಾಡಿ, ಬೆಟ್ಟದಪುರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಡಿಯೋ ಕಾನ್ಪರೆನ್ಸ್ ವೀಕ್ಷಣೆ ಹಾಗೂ ರೈತರಿಗೆ ರಾಗಿ ಬೆಳೆ ಕುರಿತ ಪ್ರಾತಿಕ್ಷತೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರ
ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ನಿಟ್ಟಿನಲ್ಲಿ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಹೆಮ್ಮಯ ಸಂಗತಿಯಾಗಿದ್ದು, ಆ ಮೂಲಕ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ವಿದ್ಯಾರ್ಥಿ ವೇತನವನ್ನು ಹಸ್ತಾಂತರ ಮಾಡಲಾಗುತ್ತಿದ್ದು ಇದರ ಉಪಯೋಗವನ್ನು ರೈತರ ಮಕ್ಕಳು ಪಡೆದುಕೊಳ್ಳಬೇಕು ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಮಾತನಾಡಿ ರೈತರು ಕೃಷಿಯಲ್ಲಿ ಹಳೆಯ ಪದ್ಧತಿಗಳನ್ನು ಕೈಬಿಟ್ಟು ಆಧುನೀಕ ಬಿತ್ತನೆ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ತಂತ್ರಜ್ಞಾನ ಬೆಳೆದಂತೆ ಕೃಷಿ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು ಮತ್ತು ಬದಲಾವಣೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರು ಉತ್ತಮ ಇಳುವರಿ ಹಾಗೂ ಆರ್ಥಿಕ ಭಧ್ರತೆಗಾಗಿ ವೈಜ್ಞಾನಿಕ ಪದ್ದತಿಯಲ್ಲಿ ವ್ಯವಸಾಯದ ಕ್ರಮಗಳನ್ನು ಅನುಸರಿಸಬೇಕು, ಭೂಮಿಯ ಹವಾಗುಣಕ್ಕೆ ಹೊಂದಿಕೊಳ್ಳುವಂತ
ಬಿತ್ತನೆಬೀಜ, ರಸಗೊಬ್ಬರ, ಕೀಟನಾಶಕಗಳನ್ನು  ಸಿಂಪಡಿಸಿ ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ರೈತರು ಅಭಿವೃದ್ಧಿ ಹೊಂದಬೇಕು. ಪಿರಿಯಾಪಟ್ಟಣ ತಾಲೂಕಿನಲ್ಲಿ   ಪ್ರತೀ ವರ್ಷ ಹೆಚ್ಚಾಗಿ ರೈತರು ರಾಗಿ ಬೆಳೆ ಬೆಳೆಯಲು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು ಆರ್ಥಿಕವಾಗಿ ಸಬಲರಾಗಲು ಮಾರ್ಗೋಪಾಯ ಕಂಡುಕೊಂಡಿರುವುದು ಹೆಮ್ಮಯ ಸಂಗತಿ  ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಮಹೇಶ್, ವಿಕಾಶ್, ಹಿತೈಶ್, ಧನಂಜಯ್, ಗ್ರಾ.ಪಂ.ಅಧ್ಯಕ್ಷೆ ಸುವರ್ಣ ಗಣೇಶ್, ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಮಡರಾದ ಬಿಟಿಎಂ ಅಶೋಕ್, ಶಾಂತೇಗೌಡ, ಗೋವಿಂದೇಗೌಡ, ರಘುನಾಥ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top