ಪಿರಿಯಾಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು MLA K.Mahadev ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು 01/11/2021

ಪಿರಿಯಾಪಟ್ಟಣ: ಕನ್ನಡ ಸಾಹಿತ್ಯ ಕ್ಷೇತ್ರ ವಿಶ್ವದಲ್ಲಿಯೇ ಪ್ರಸಿದ್ಧಿಯಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದು ಶಾಸಕ ಕೆ.ಮಹದೇವ್ ಅವರು ಹೇಳಿದರು.
ಪಟ್ಟಣದ ಗೋಣಿಕೊಪ್ಪ ರಸ್ತೆಯ ಜ್ಯೂನಿಯರ್ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಕನ್ನಡ ನಾಡಿನಲ್ಲಿ ಹುಟ್ಟಿ ಬೆಳೆದ ನಾವು ಭಾಷೆ ಹಾಗೂ ನಾಡನ್ನು ಗೌರವಿಸಬೇಕು, ಈಚಿನ ದಿನಗಳಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದಕರ ಸಂಗತಿ, ಅನ್ಯ ಭಾಷಿಕರಿಗೂ ಕನ್ನಡ ಕಲಿಸುವ ಮೂಲಕ ನಾಡು ನುಡಿಯ ಬಗ್ಗೆ ವಿಶೇಷ ಅಭಿಮಾನ ಬೆಳೆಸಿಕೊಳ್ಳಬೇಕು, ರಾಜ್ಯ ಸರ್ಕಾರ ಮಾತಾಡ್ ಮಾತಾಡ್ ಕನ್ನಡ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿ ಕನ್ನಡ ನಾಡು ನುಡಿಯ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಕಸಾಪ ತಾಲ್ಲೂಕು ಅಧ್ಯಕ್ಷ ಗೊರಳ್ಳಿ ಜಗದೀಶ್ ಪ್ರಧಾನ ಭಾಷಣಕಾರರಾಗಿ ಮಾತನಾಡಿ ಕನ್ನಡನಾಡು ಅನ್ಯ ಭಾಷಿಕರಿಗೂ ನೆಲೆ ನೀಡಿ ಸರ್ವ ಜನಾಂಗದವರನ್ನು ಸರಿಸಮನಾಗಿ ಕಂಡ ಅತ್ಯದ್ಭುತ ನಾಡು ಎಂದು ರಾಷ್ಟ್ರಕವಿ ಕುವೆಂಪು ಅವರ ಕವಿ ಗೀತೆಯಲ್ಲಿ ಸಂದೇಶ ನೀಡಲಾಗಿದೆ, ಸುಮಾರು 2500 ವರ್ಷ ಸುಧೀರ್ಘ ಇತಿಹಾಸವಿರುವ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ದಾಸರು ಶರಣರು ಕವಿಗಳು ಮತ್ತು ಸಾಹಿತಿಗಳ ಕೊಡುಗೆ ಅಪಾರವಾದುದು, ಕನ್ನಡ ಭಾಷೆಯಲ್ಲಿ ಸಿಗುವಷ್ಟು ಮಹಾಕಾವ್ಯ ಹಾಗೂ ಸಾಹಿತ್ಯ ದೇಶದ ಮತ್ಯಾವ ಭಾಷೆಯಲ್ಲೂ ಸಿಗುವುದಿಲ್ಲ, ಅತ್ಯಂತ ಸಂಪದ್ಭರಿತವಾದ ನಾಡು ನಮ್ಮ ಕನ್ನಡ ನಾಡು ಎಂದರು.

ತಹಸೀಲ್ದಾರ್ ಕೆ.ಚಂದ್ರಮೌಳಿ ರವರು ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದರು,

ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ವಿತರಣೆಗೆ ಶಾಸಕರು ಚಾಲನೆ ನೀಡಿದರು,
ವಿಧವಾ ಮಹಿಳೆಯರಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಲಾಯಿತು,
ಸಿಡಿಪಿಒ ಇಲಾಖೆ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು,
ವಿದ್ಯಾರ್ಥಿಗಳ ಛದ್ಮವೇಷ ಪ್ರೇಕ್ಷಕರ ಗಮನ ಸೆಳೆಯಿತು,
ಚಿತ್ರನಟ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಈ ಸಂದರ್ಭ ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್, ಉಪಾಧ್ಯಕ್ಷೆ ನಾಗರತ್ನ, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್ ವಿನೋದ್, ಸದಸ್ಯರಾದ ಪಿ.ಸಿ ಕೃಷ್ಣ, ಪ್ರಕಾಶ್ ಸಿಂಗ್, ನಿರಂಜನ್, ನಳಿನಿ, ಲೀಲಾವತಿ, ಮುಖ್ಯಾಧಿಕಾರಿ ಎ.ಟಿ ಪ್ರಸನ್ನ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮೋಹನ್ ಕುಮಾರ್, ಎಪಿಎಂಸಿ ಅಧ್ಯಕ್ಷ ಶಂಕರಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ತಾಪಂ ಇಒ ಸಿ.ಆರ್ ಕೃಷ್ಣಕುಮಾರ್, ಬಿಇಒ ವೈ.ಕೆ ತಿಮ್ಮೇಗೌಡ, ಶಿರಸ್ತೇದಾರ್ ಗಳಾದ ನಂದಕುಮಾರ್, ಟ್ರಿಜಾ, ವಿವಿಧ ಇಲಾಖೆ ಮೇಲಧಿಕಾರಿಗಳಾದ ಚಿಕ್ಕಣ್ಣ, ಜಯಂತ್, ಕುಮಾರ್, ಪ್ರಸಾದ್, ರತನ್ ಕುಮಾರ್, ಡಾ.ಸೋಮಯ್ಯ, ಡಾ.ಸಂದೇಶ್, ಶಿಕ್ಷಣ ಮತ್ತು ಅಂಗನವಾಡಿ ಹಾಗು ವಿವಿಧ ಇಲಾಖೆ ಸಿಬ್ಬಂದಿ ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top