
ತಾಲೂಕಿನ ರಾವಂದೂರು ಗ್ರಾಮದಲ್ಲಿ 2 ಕೋಟಿ ವೆಚ್ಚದ ಪಬ್ಲಿಕ್ ಶಾಲೆ ಕಟ್ಟಡದ ಕಾಮಗಾರಿ ಗುದ್ದಲಿ ಪೂಜೆ, 31.50 ಲಕ್ಷ ರೂ ವೆಚ್ಚದ ಸರ್ಕಾರಿ ಪದವಿಪೂರ್ವ ಪ್ರೌಢಶಾಲಾ ವಿಭಾಗದ ಎರಡು ಕೊಠಡಿಗಳ ಉದ್ಘಾಟನೆ , 21.20 ಲಕ್ಷ ರು ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಎರಡು ಕೊಠಡಿ, 11.00 ಲಕ್ಷ ರೂ ವೆಚ್ಚದ ಕಿರನ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕಾಮಗಾರಿ ಗುದ್ದಲಿ ಪೂಜೆ, 11.00 ಲಕ್ಷ ರೂ ವೆಚ್ಚದ ತಾತನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ತರಗತಿ ಕಟ್ಟಡದ ಉದ್ಘಾಟನೆ, ಹಾಗೂ 33 ಲಕ್ಷ ರೂ ವೆಚ್ಚದ ಅಬ್ಬುರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ಕಟ್ಟಡದ ಉದ್ಘಾಟನೆ ನೆರವೇರಿಸಿದರು
ನಂತರ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣವನ್ನು ಪ್ರೋತ್ಸಾಹಿಸಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ, ಈಚಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಹೆಚ್ಚು ಪ್ರಗತಿ ತೋರಿಸುತ್ತಿರುವುದು ಶ್ಲಾಘನೀಯ, ಪೋಷಕರು ಪ್ರತಿಷ್ಠೆ ಬಿಟ್ಟು ತಮ್ಮ ವಿದ್ಯಾರ್ಥಿಗಳನ್ನು ಹತ್ತಿರದ ಸರ್ಕಾರಿ ಶಾಲೆಗಳಿಗೆ ಸೇರಿಸಿ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಾವಸ್ಥೆ ತಲುಪಿರುವುದನ್ನು ಮನಗಂಡು ಸರ್ಕಾರಕ್ಕೆ ಮನವಿ ಸಲ್ಲಿಸಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿ ಈಗಾಗಲೇ ತಾಲ್ಲೂಕಿನ ಹಲವೆಡೆ ನೂತನ ಕೊಠಡಿಗಳ ನಿರ್ಮಾಣವಾಗಿ ಉದ್ಘಾಟನೆಯಾಗಿದ್ದು ಹಲವೆಡೆ ಕಾಮಗಾರಿ ಪ್ರಗತಿಯಲ್ಲಿದೆ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ ಕಟ್ಟಡ ದೀರ್ಘಕಾಲ ಬಾಳಿಕೆ ಬರುವಂತೆ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದರು.
ಈ ಸಂದರ್ಭ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ತಾ.ಪಂ ಮಾಜಿ ಸದಸ್ಯ ಟಿ.ಈರಯ್ಯ, ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಬಿಇಒ ವೈ.ಕೆ ತಿಮ್ಮೇಗೌಡ, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.