
ಈ ವೇಳೆ ಮಾತನಾಡಿದ ಶಾಸಕರು ಸರ್ಕಾರ ಇಲ್ಲದಿದ್ದರೂ ಸಂಬಂಧಪಟ್ಟ ಸಚಿವರುಗಳಿಗೆ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಮನವರಿಕೆ ಮಾಡಿ ಕಷ್ಟಪಟ್ಟು ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು ಗುತ್ತಿಗೆದಾರರು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಕಾಮಗಾರಿಗಳ ಸಂದರ್ಭ ಸ್ಥಳೀಯ ಮುಖಂಡರು ಸಹ ನಿಗಾ ವಹಿಸಬೇಕು, ತಾಲ್ಲೂಕಿನ ಹಲವೆಡೆ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಕಾಣಿಸಿ ಅನಾರೋಗ್ಯಕ್ಕೀಡಾಗಿದ್ದು ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಪಶುವೈದ್ಯ ಇಲಾಖೆ ಮೇಲಧಿಕಾರಿಗಳು ಮತ್ತು ಸ್ಥಳೀಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ, ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ದೂರುಗಳು ಕೇಳಿಬರುತ್ತಿದ್ದು ಸಮಸ್ಯೆಯ ಬಗ್ಗೆ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು.
ಈ ವೇಳೆ ಬೆಕ್ಕರೆ, ಭುವನಹಳ್ಳಿ, ಕೂರ್ಗಲ್ಲು, ಸೀಗೂರು ಮತ್ತು ಹಿಟ್ನೆಹೆಬ್ಬಾಗಿಲು ಗ್ರಾಮಗಳ ಗ್ರಾಮ ಪರಿಮಿತಿ ರಸ್ತೆ ಕಾಮಗಾರಿಗೆ ಚಾಲನೆ ಹಾಗೂ ಬೆಕ್ಕರೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿ ಉದ್ಘಾಟನೆ ಹಾಗೂ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ಈ ಸಂದರ್ಭ ಭುವನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಸರಿತಾ ಶಂಕರ್, ಉಪಾಧ್ಯಕ್ಷ ಶಿವಕುಮಾರ್, ಹಿಟ್ನೆಹೆಬ್ಬಾಗಿಲು ಗ್ರಾ.ಪಂ ಅಧ್ಯಕ್ಷೆ ಮೀನಾಕ್ಷಮ್ಮ ಮತ್ತು ಸದಸ್ಯರು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ತಾ.ಪಂ ಮಾಜಿ ಉಪಾಧ್ಯಕ್ಷ ರಘುನಾಥ್, ತಹಸೀಲ್ದಾರ್ ಕೆ.ಚಂದ್ರಮೌಳಿ, ಇಒ ಸಿ.ಆರ್ ಕೃಷ್ಣಕುಮಾರ್, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಸಿಡಿಪಿಒ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.