
ಪಿರಿಯಾಪಟ್ಟಣ: ಜೆಡಿಎಸ್ ಪಕ್ಷದ ಕಾರ್ಯಕರ್ತರು ಕ್ರಿಯಾಶೀಲರಾಗಿ ಸಂಘಟನೆಗೆ ಒತ್ತು ಕೊಡುವ ಮೂಲಕ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು.ತಾಲೂಕಿನ ಭುವನಹಳ್ಳಿ ಗ್ರಾಮದಲ್ಲಿ ನಡೆದ ಗ್ರಾ.ಪಂ ವ್ಯಾಪ್ತಿಯ ಜೆಡಿಎಸ್ ಪಕ್ಷದ ಕಾರ್ಯಕರ್ತರ ಜನತಾ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಶಾಸಕನಾಗಿ ಆಯ್ಕೆಯಾದ ನಂತರ ತಾಲ್ಲೂಕಿನಾದ್ಯಂತ ಕಾರ್ಯಕರ್ತರು ಮನವಿ ಮಾಡುವ ತಮ್ಮ ಗ್ರಾಮಗಳ ಮೂಲಭೂತ ಸೌಕರ್ಯ ಸಮಸ್ಯೆಗಳಿಗೆ ಸ್ಪಂದಿಸಿ ಪ್ರತಿ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ, ನನ್ನ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮತದಾರರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ತಳಹಂತದಿಂದ ಸಂಘಟಿತರಾಗಬೇಕು ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತಿದೆ, ನನ್ನ ಜನಪ್ರಿಯತೆಯನ್ನು ಸಹಿಸದ ವಿರೋಧಿಗಳು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು ಅದಕ್ಕೆಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ತಕ್ಕ ಉತ್ತರ ನೀಡುತ್ತಿದೆನೆ, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಪ್ರತಿಯೊಬ್ಬರು ಹೆಚ್ಚು ಶ್ರಮ ವಹಿಸುವಂತೆ ಕೋರಿದರು.ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ ಅವರು ಮಾತನಾಡಿ ಚುನಾವಣೆಗಳು ಬಂತೆಂದರೆ ವಿರೋಧಿಗಳು ನಮ್ಮ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಪರ ಅಪಪ್ರಚಾರದಲ್ಲಿ ತೊಡಗಿ ಶಾಸಕ ಕೆ.ಮಹದೇವ್ ಅವರು ಚಾಲನೆ ನೀಡಿದ ಕಾಮಗಾರಿಗಳನ್ನು ಹಿಂದಿನ ಅವಧಿಯಲ್ಲಿನ ಅನುದಾನ ಎಂಬಂತೆ ಬಿಂಬಿಸಿ ಜನತೆಯಲ್ಲಿ ಗೊಂದಲ ಮೂಡಿಸುತ್ತಿದ್ದಾರೆ, ಶಾಸಕ ಕೆ.ಮಹದೇವ್ ಅವರ ಅಧಿಕೃತ ವೆಬ್ ಸೈಟ್ ನಲ್ಲಿ ಅವರ ಅವಧಿಯಲ್ಲಿ ತಾಲ್ಲೂಕಿಗೆ ಮಂಜೂರಾದ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇದ್ದು ಕಾರ್ಯಕರ್ತರು ಅದನ್ನು ಮತದಾರರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ತಿಳಿಸಿದರು.
ಈ ಸಂದರ್ಭ ಜಿ.ಪಂ ಮಾಜಿ ಸದಸ್ಯ ಕೆ.ಎಸ್ ಮಂಜುನಾಥ್, ತಾ.ಪಂ ಮಾಜಿ ಸದಸ್ಯರಾದ ಟಿ.ಈರಯ್ಯ, ರಂಗಸ್ವಾಮಿ, ರಘುನಾಥ್, ಶೋಭಾ, ಗ್ರಾ.ಪಂ ಸದಸ್ಯರಾದ ದೀಪುಗಿರೀಶ್, ನಂದಿನಿಸುರೇಶ್, ಮುಖಂಡರಾದ ಕುಮಾರಸ್ವಾಮಿ ವಿದ್ಯಾಶಂಕರ್ ಈಶ್ವರಯ್ಯ ರಾಜೇಗೌಡ ನಾಗೇಂದ್ರ ನಾರಾಯಣಶೆಟ್ಟಿ ಯೋಗಣ್ಣ, ಗ್ರಾ.ಪಂ ವ್ಯಾಪ್ತಿಯ ಸ್ಥಳೀಯ ಜನಪ್ರತಿನಿಧಿಗಳು ಮುಖಂಡರು ಕಾರ್ಯಕರ್ತರು ಹಾಜರಿದ್ದರು.