ಕರ್ನಾಟಕ ಪಾರದರ್ಶಕ (ಕೆಟಿಪಿಪಿ) ಕಾಯ್ದೆ ನಿರ್ಲಕ್ಷಿಸಿ ಇಚ್ಚಾ ಪ್ರಕಾರ ಗುತ್ತಿಗೆ ನೀಡಲಾಗಿದೆ ಎಂದು ಗಂಗಾಕಲ್ಯಾಣ ವಿಶೇಷ ಸದನ ಸಮಿತಿ ಅಧ್ಯಕ್ಷ ಡಾ ವೈ ಎ ನಾರಾಯಣಸ್ವಾಮಿ ಆರೋಪಿಸಿದರು. 04/01/2022

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮೈಸೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫಲಾನುಭವಿಗಳಿಗೆ ನೀಡಲಾಗಿರುವ ಕೊಳವೆಬಾವಿ ಸೌಲಭ್ಯದ ಗುಣಮಟ್ಟದ ಬಗ್ಗೆ ಪರಿಶೀಲನೆಗೂ ಮುನ್ನ ಮಾತನಾಡಿದರು.ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಹೊಣೆಗಾರಿಕೆ ಸಮಿತಿಗೆ ಇದ್ದು ಇವುಗಳು ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಉದ್ದೇಶ ಈ ಸದನ ಸಮಿತಿ ದಾಗಿದೆ ಎಂದರು.ಅಧಿಕಾರಿಗಳು ಮತ್ತು ಗುತ್ತಿಗೆದಾರರ ಹೊಂದಾಣಿಕೆಯಿಂದ ಯಾವುದೇ ನಿಯಮವನ್ನು ಪಾಲಿಸದೆ ಫಲಾನುಭವಿಗಳಿಗೆ ಅನ್ಯಾಯ ಮಾಡಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿದರು.ಡಾ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ. ಡಾ ಬಾಬು ಜಗಜೀವನ್ ರಾಮ್ ನಿಗಮ. ಡಿ ದೇವರಾಜ ಅರಸ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಸೇರಿದಂತೆ 4 ಇಲಾಖೆಗಳಲ್ಲಿ ಈ ಹಿಂದೆ ನೀಡಲಾಗಿರುವ ಸಣ್ಣ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆಬಾವಿಗಳನ್ನು ನೀಡುವ ಬಗ್ಗೆ ಪರಿಶೀಲಿಸಿ ನಡೆದಿರುವ ಅವ್ಯವಹಾರದ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ ಮಹದೇವ್ ಸಮಿತಿ ಸದಸ್ಯರನ್ನು ಅಭಿನಂದಿಸಿದರು ಸದಸ್ಯರಾದ ಬಸುರಾಜ್ ಪಾಟೀಲ್ ಇಟಿಗಿ. ಎಸ್ ರವಿ. ಎಂಪಿ ಸುನಿಲ್ ಸುಬ್ರಮಣಿ. ನಿರಾಣಿ ಹನುಮಂತರುದ್ರಪ್ಪ. ಎಂ ಎ ಗೋಪಾಲಸ್ವಾಮಿ. ಕಾಂತರಾಜು (ಬಿ ಎಂ ಎಲ್) ಬಿಎಂ ಪಾರೂಕ್. ಕೆ ಪ್ರತಾಪ್ ಸಿಂಹ ನಾಯಕ್. ತಹಸೀಲ್ದಾರ್ ಕೆ.ಚಂದ್ರಮೌಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್ ಕೃಷ್ಣ ಕುಮಾರ್, ತಾಪಂ ಮಾಜಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಟಿ ಈರಯ್ಯ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top