
ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಶಾಸಕ ಕೆ ಮಹದೇವ್ ರವರು 1.9 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ತಾಲೂಕಿನ ಗಳಗನ ಕೆರೆ ಗ್ರಾಮದಲ್ಲಿ 21.85 ಲಕ್ಷ ರು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಕಿತ್ತೂರು ಕಾಳೇಗೌಡನ ಕೊಪ್ಪಲು ಗ್ರಾಮದಲ್ಲಿ 13.29 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ , ಕಿತ್ತೂರು ಸಿಂಗ್ರಿ ಗೌಡನ ಕೊಪ್ಪಲು ಗ್ರಾಮದಲ್ಲಿ 14.51 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಕಿತ್ತೂರು ಬೋಲಾರಿ ಗೌಡನ ಕೊಪ್ಪಲು ಗ್ರಾಮದಲ್ಲಿ 18.24 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಕಿತ್ತೂರು ಮೂಡಲಕೊಪ್ಪಲು ಗ್ರಾಮದಲ್ಲಿ 15.98 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಎಸ್ ಕೊಪ್ಪಲು ಗ್ರಾಮದಲ್ಲಿ 13.25 ಮಹಿಳಾ ಸ್ವಸಹಾಯ ಸಂಘ ಕಟ್ಟಡದ ಗುದ್ದಲಿ ಪೂಜೆ ಮತ್ತು 11 ಲಕ್ಷ ರೂ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, ಕಿತ್ತೂರು ಗ್ರಾಮದಲ್ಲಿ ನೂತನ ಶಾಲಾ ಕೊಠಡಿಯ ಉದ್ಘಾಟನೆ ಮತ್ತು ಮೂಡಲ ಕೊಪ್ಪಲು ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕರು ಕಿತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಈ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವ ಜೊತೆಗೆ ಈ ಕಾಮಗಾರಿಗಳ ಗುಣಮಟ್ಟವನ್ನು ಕಾಪಾಡಲು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಉತ್ತಮ ಕೆಲಸಗಳನ್ನು ನಡೆಸಲು ಸಹಕಾರಿಯಾಗುತ್ತದೆ. ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಅಭಿವೃದ್ಧಿ ಪಡಿಸಿದವರನ್ನು ಮರೆಯದೆ ಚುನಾವಣಾ ಸಂದರ್ಭದಲ್ಲಿ ಮತ ನೀಡಿದರೆ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸಕ್ಕೆ ಕೈಜೋಡಿಸಿ ದಂತಾಗುತ್ತದೆ. ಇತ್ತೀಚಿನ ದಿನಗಳಲ್ಲಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ವಿರೋಧಿಗಳು ಕೆಲಸಕಾರ್ಯಗಳ ತೊಂದರೆ ಮತ್ತು ಜನರಲ್ಲಿ ತಪ್ಪು ಮನೋಭಾವನೆ ಮೂಡಿಸುತ್ತಿದ್ದಾರೆ ಅಂಥವರ ಮಾತಿಗೆ ಕಿವಿಗೊಡದೆ ಅಭಿವೃದ್ಧಿ ಕೆಲಸಕ್ಕೆ ಕೈಜೋಡಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣ ಶೆಟ್ಟಿ, ತಶಿಲ್ದಾರ್ ಕೆ ಚಂದ್ರಮೌಳಿ, ಇವು ಸಿಆರ್ ಕೃಷ್ಣಕುಮಾರ್, ಬಿಇಓ ತಿಮ್ಮೇಗೌಡ, ಎಇಇ ಗಳಾದ ಮಂಜುನಾಥ್, ಪ್ರಭು , ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಸಿಡಿಪಿಒ ಕುಮಾರ್, ಮುಖಂಡರಾದ ಆರ್ ಎಲ್ ಮಣಿ, ರಾಮಚಂದ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್ ಆರ್ ದೀಪು ರಾಜೇಂದ್ರ ಡಿಜೆ ಕುಮಾರ್ , ಭಾರತಿ ಪಿಡಿಒ ಗಣೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.