
ಪಿರಿಯಾಪಟ್ಟಣ: ತಾಲ್ಲೂಕಿನ ವಿವಿಧೆಡೆ 76 ಲಕ್ಷ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿಗಳಲ್ಲಿನ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.
ತಾಲ್ಲೂಕಿನ ನಂದಿಪುರ ಕಾನೂರು ಹಾಗೂ ಕೊಣಸೂರು ಗ್ರಾಮದ ಪರಿಶಿಷ್ಟ ಕಾಲೊನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು, ನಂತರ ಮಾತನಾಡಿದ ಶಾಸಕರು ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೂ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಅನುದಾನ ಮಂಜೂರು ಮಾಡಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ, ತಾಲ್ಲೂಕಿನಲ್ಲಿ ಈ ಹಿಂದೆ ಆಡಳಿತ ನಡೆಸಿದವರ ನಿರ್ಲಕ್ಷ್ಯತನದಿಂದ ಅಭಿವೃದ್ಧಿ ಕುಂಠಿತವಾಗಿದ್ದು ಶಾಸಕನಾದ ನಂತರ ಪ್ರತಿ ಗ್ರಾಮಗಳಿಗೆ ಆದ್ಯತೆ ಮೇರೆ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ, ಸರ್ವೋದಯ ಗ್ರಾಮದ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವ ಮೂಲಕ ದೀರ್ಘಕಾಲ ಬಾಳಿಕೆ ಬರುವಂತೆ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದರು, ನನ್ನ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗುವಂತೆ ಸೂಚಿಸಿದರು.
ಈ ಸಂದರ್ಭ ತಾ.ಪಂ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ್, ರಘುನಾಥ್, ಟಿಎಪಿಸಿಎಂಎಸ್ ನಿರ್ದೇಶಕ ದೊರೆಕೆರೆ ನಾಗೇಂದ್ರ, ಕೋಮಲಾಪುರ ಗ್ರಾ.ಪಂ ಅಧ್ಯಕ್ಷೆ ಸುಗುಣಾ, ಉಪಾಧ್ಯಕ್ಷ ಕೆ.ಟಿ ಗಣೇಶ್, ಸದಸ್ಯರಾದ ಮಂಜುನಾಥ್, ಪಾಪೇಗೌಡ, ಅಶೋಕ್, ಮುಖಂಡರಾದ ರಾಜಯ್ಯ, ಶಿವರಾಜ್, ನಟರಾಜ್, ಶಂಕರ್, ಪುಟ್ಟರಾಜು, ಪಿಡಿಒ ಶಿವನಗೌಡ ಕೋರಿಗೌಡ್ರು, ಪಿಡಬ್ಲ್ಯುಡಿ ಎಇಇ ಜಯಂತ್, ಬಿಇಒ ವೈ.ಕೆ ತಿಮ್ಮೇಗೌಡ, ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.