
ತಾಲ್ಲೂಕಿನ ದೊಡ್ಡಹಾರವೇ ಬ್ಲಾಕ್ 2 , ದೊಡ್ಡ ಹೊನ್ನೂರು ಕಾವಲ್, ಚನ್ನಕೇಶವಪುರ, ಹಾರನಹಳ್ಳಿ ಹಾಗು ತರಿಕಲ್ಲು ಗ್ರಾಮಗಳಲ್ಲಿ 1 .47 ಕೋಟಿ ರೂ ಅಂದಾಜು ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಕೆ ಮಹದೇವ್ ಗುದ್ದಲಿ ಪೂಜೆ ನೆರವೇರಿಸಿದರು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ತಾಲ್ಲೂಕಿನ ಎಲ್ಲಾ ಸಮುದಾಯದ ಜನರಿಗೆ ಸರ್ಕಾರದ ಸವಲತ್ತು ಸಿಗುವಂತಾಗಬೇಕು ಈ ಉದ್ದೇಶದಿಂದ ಪ್ರತಿ ಗ್ರಾಮಗಳಲ್ಲಿಯೂ ಸಮುದಾಯಕ್ಕೆ ತಕ್ಕಂತೆ ಎಲ್ಲರಿಗೂ ಸಮನಾಗಿ ಅಭಿವೃದ್ಧಿ ಕೆಲಸವನ್ನು ಸಮನಾಗಿ ಹಂಚಿಕೆ ಮಾಡಿ ಒಮ್ಮತದಿಂದ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದರು. ರಸ್ತೆ ಮತ್ತು ಚರಂಡಿ ಕಾಮಗಾರಿಗಳ ನಡೆಯುವ ಸಂದರ್ಭದಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸ ಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಅನ್ನಯಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ರಘುನಾಥ್, ಬಿ.ಇ.ಒ ವೈಕೆ ತಿಮ್ಮೇಗೌಡ, ಪಶುವ್ಯದ್ಯಾಧಿಕಾರಿ ಸೋಮಯ್ಯ ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರು ಇದ್ದರು.