
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 2 ಕೋಟಿ ರೂ ವೆಚ್ಚದ ಮಾಕೋಡು ಮಂಟಿಕೊಪ್ಪಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗು ಕಗ್ಗುಂಡಿ ಗ್ರಾಮದಲ್ಲಿ 11 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಮೇಲ್ತೊಟ್ಟಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.
ತಾಲ್ಲೂಕಿನ ವಿವಿಧೆಡೆ ಮೂಲಸೌಕರ್ಯಗಳ ಸಮಸ್ಯೆ ಬಗೆಹರಿಸಲು ಹಂತಹಂತವಾಗಿ ಅನುದಾನ ಮಂಜೂರು ಮಾಡಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.ತಾಲ್ಲೂಕಿನಾದ್ಯಂತ ಹದಗೆಟ್ಟ ರಸ್ತೆಗಳ ದುರಸ್ತಿಗಾಗಿ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಅನುದಾನ ಮಂಜೂರು ಮಾಡಿಸಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದೇನೆ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಪಕ್ಷಾತೀತವಾಗಿ ಅನುದಾನ ನೀಡುತ್ತಿದ್ದೇನೆ, ಮುಂದೆಯೂ ಮತ್ತಷ್ಟು ಅನುದಾನ ನೀಡುವ ಭರವಸೆ ನೀಡಿದರು, ಹಂತಹಂತವಾಗಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ, ನಮಗೆ ಸಹಕಾರ ನೀಡಿದ ಎಲ್ಲಾ ಮತದಾರರಿಗೆ ಆದ್ಯತೆ ಮೇರೆಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವುದು ನನ್ನ ಮೊದಲ ಕರ್ತವ್ಯವಾಗಿದೆ, ಕಷ್ಟಕಾಲದಲ್ಲಿ ಸಹಕಾರ ನೀಡಿದವರಿಗೆ ಕೃತಜ್ಞತೆ ಹೇಳುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯ ಎಂದರು.
ಈ ಸಂದರ್ಭ ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಬಿಇಒ ವೈ.ಕೆ ತಿಮ್ಮೇಗೌಡ, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಆರ್ ಡಬ್ಲ್ಯುಎಸ್ ಎಇಇ ಪ್ರಭು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಕೆ.ಕೆ ಹರೀಶ್, ಚೆಲುವೇಗೌಡ, ರಾಮಕೃಷ್ಣ, ವಿವಿಧ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಮುಖಂಡರು ಹಾಜರಿದ್ದರು.