ಮಂಚದೇವನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ” ಕಾರ್ಯಕ್ರಮ 19/02/2022

ಪಿರಿಯಾಪಟ್ಟಣ: ಸಾರ್ವಜನಿಕ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕಂದಾಯ ಇಲಾಖೆ ವತಿಯಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕೆ.ಮಹದೇವ್ ಹೇಳಿದರು.ತಾಲ್ಲೂಕಿನ ಮಂಚದೇವನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಸಾರ್ವಜನಿಕರು ಸಮಸ್ಯೆಯ ಅರ್ಜಿ ನೀಡಿದರಷ್ಟೇ ಕೆಲಸವಾಗುವುದಿಲ್ಲ ಸಂಬಂಧಿಸಿದ ಇಲಾಖೆಗಳ ಸಂಪರ್ಕದಲ್ಲಿದ್ದು ಶೀಘ್ರ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು, ಸಮಸ್ಯೆ ಪರಿಹಾರಕ್ಕೆ ನಿರ್ಲಕ್ಷ್ಯ ತೋರುವ ಇಲಾಖೆಗಳ ವಿರುದ್ಧ ದೂರು ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು, ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಒಮ್ಮತದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಸಮಯಕ್ಕೆ ತಲುಪಲು ಸಾಧ್ಯ, ಮೊದಲ ಬಾರಿಗೆ ಶಾಸಕನಾದ ನಂತರ ಪ್ರವಾಹ ಮತ್ತು ಕೊರೊನಾದಂತಹ ಸಾಕಷ್ಟು ಪರ್ವತದಂತಹ ಸಮಸ್ಯೆ ಎದುರಿಸಿದ್ದರು ತಾಲ್ಲೂಕಿನ ಅಭಿವೃದ್ಧಿಗೆ ಶಕ್ತಿಮೀರಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸುತ್ತಿದ್ದು ಸದ್ಬಳಕೆ ಮಾಡಿಕೊಳ್ಳುವ ಜವಾಬ್ದಾರಿ ನಿಮ್ಮೆಲ್ಲರದು ಎಂದರು.

ತಹಸೀಲ್ದಾರ್ ಕೆ.ಚಂದ್ರಮೌಳಿ ಅವರು ಮಾತನಾಡಿ ತಾಲ್ಲೂಕಿನಲ್ಲಿ ಕಂದಾಯ ಸೇರಿದಂತೆ ವಿವಿಧ ಇಲಾಖೆ ನೌಕರರು ಸದಾ ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು ಈ ಕಾರ್ಯಕ್ರಮದ ಮೂಲಕ ಮತ್ತಷ್ಟು ಚುರುಕಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ, ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡಿರುವವರು ಮಾ.31ರೊಳಗೆ ಅರ್ಜಿ ಸಲ್ಲಿಸಿದಲ್ಲಿ ಅಂತಹ ಮನೆಗಳನ್ನು ಸಕ್ರಮಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಮಾಡಿಕೊಡಲಾಗುವುದು ಎಂದರು.

ತಾ.ಪಂ ಇಓ ಸಿ.ಆರ್ ಕೃಷ್ಣಕುಮಾರ್ ಅವರು ಮಾತನಾಡಿ ಗ್ರಾಮಾಂತರ ಪ್ರದೇಶಗಳ ಮೂಲಸೌಕರ್ಯ ಅಭಿವದ್ಧಿಗೆ ಸಾರ್ವಜನಿಕರು ಗ್ರಾ.ಪಂ ಮೂಲಕ ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಪಿಂಚಣಿ, ಮೂಲಭೂತ ಸೌಕರ್ಯ ಸೇರಿದಂತೆ ಹಲವು ಸಮಸ್ಯೆ ಬಗೆಹರಿಸಲು ಸಾರ್ವಜನಿಕರು ಅರ್ಜಿ ನೀಡಿದರು, ಬೈಲಕುಪ್ಪೆ ಗ್ರಾ.ಪಂ ವತಿಯಿಂದ ವಿಶೇಷಚೇತನರಿಗೆ ಸಹಾಯಧನ ಚೆಕ್ ವಿತರಿಸಲಾಯಿತು.


ಸೆಸ್ಕ್ ಅಧಿಕಾರಿಗೆ ತರಾಟೆ: ರೈತರ ನೀರಾವರಿ ಜಮೀನು ಸೇರಿದಂತೆ ಮನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಸಾರ್ವಜನಿಕರು ಶಾಸಕರಿಗೆ ದೂರಿದಾಗ ಕಾರ್ಯಕ್ರಮಕ್ಕೆ ಸೆಸ್ಕ್ ಎಇಇ ಅನಿಲ್ ರವರು ಗೈರಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಅವರಿಗೆ ಕರೆ ಮಾಡಿ ಇಲಾಖೆ ಕೆಲಸಗಳು ಏನೇ ಇದ್ದರೂ ಮೊದಲು ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವಂತೆ ಎಚ್ಚರಿಕೆ ನೀಡಿದರು.


ಈ ಸಂದರ್ಭ ಬೈಲಕುಪ್ಪೆ ಗ್ರಾ.ಪಂ ಅಧ್ಯಕ್ಷೆ ಶಿವಮ್ಮ, ಪಿಡಿಒ ಬೋರೇಗೌಡ ಮತ್ತು ಸದಸ್ಯರು, ಕೊಪ್ಪ ಗ್ರಾ.ಪಂ ಅಧ್ಯಕ್ಷ ರೇಣುಕಾಸ್ವಾಮಿ, ಉಪಾಧ್ಯಕ್ಷೆ ಸಿಂಧು, ಚನ್ನಕಲ್ ಕಾವಲು ಗ್ರಾ.ಪಂ ಉಪಾಧ್ಯಕ್ಷ ಧನರಾಜ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ , ತಾ.ಪಂ ಮಾಜಿ ಸದಸ್ಯ ಎ.ಟಿ ರಂಗಸ್ವಾಮಿ, ಶಿರಸ್ತೆದಾರ್ ಟ್ರಿಜಾ, ಬಿಇಒ ವೈ.ಕೆ ತಿಮ್ಮೇಗೌಡ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಸರ್ವೆ ಅಧಿಕಾರಿ ಎಂ.ಕೆ ಪ್ರಕಾಶ್, ಜಿ.ಪಂ ಎಇಇ ಮಂಜುನಾಥ್, ಪಿಡಬ್ಲ್ಯುಡಿ ಎಇಇ ಜಯಂತ್, ಆರ್ ಡಬ್ಲ್ಯುಎಸ್ ಎಇಇ ಪ್ರಭು, ಸಿಡಿಪಿಒ ಕುಮಾರ್, ಗ್ರಾ.ಪಂ ಸದಸ್ಯರಾದ ಚಂದ್ರು, ಸುರೇಶ್, ಮಂಜುನಾಥ್, ಶೋಭಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top