
ಪಿರಿಯಾಪಟ್ಟಣ: ತಾಲ್ಲೂಕಿನ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ದೊರಕುವ ನಿಟ್ಟಿನಲ್ಲಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ಅನುದಾನ ನೀಡಿ ಕಾಯಕಲ್ಪಕ್ಕೆ ಯತ್ನಿಸಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶಾಸಕರ ನಿಧಿಯ 25 ಲಕ್ಷ ವೆಚ್ಚದ ಆಂಬುಲೆನ್ಸ್ ವಿತರಣೆ, ಸರ್ಕಾರ ಮತ್ತು ಖಾಸಗಿ ನೆರವಿನಿಂದ 1 ಕೋಟಿ ವೆಚ್ಚದ ಎರಡು ಆಕ್ಸಿಜನ್ ಪ್ಲಾಂಟ್ ಮತ್ತು 15 ಲಕ್ಷ ವೆಚ್ಚದ ಡಯಾಲಿಸಿಸ್ ಮಿಷನ್ ಉದ್ಘಾಟಿಸಿ ಅವರು ಮಾತನಾಡಿದರು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಿರುವ ಡಯಾಲಿಸಿಸ್ ಯಂತ್ರ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, 25 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಶವಾಗಾರ ನಿರ್ಮಾಣ ಕಾರ್ಯ ಸಾಗಿದೆ, ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ದೊರಕುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಸಿಬ್ಬಂದಿ ಸೌಜನ್ಯಯುತವಾಗಿ ವರ್ತಿಸಿ ಉತ್ತಮ ಸೇವೆ ನೀಡುವ ಕಡೆ ಗಮನ ಹರಿಸಬೇಕು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಜೊತೆಗೆ ಪಟ್ಟಣದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ನಗರೋತ್ಥಾನ ಯೋಜನೆಯಡಿ 30 ಕೋಟಿ ರೂ ಹಣ ಬಿಡುಗಡೆ ಮಾಡಿಸಿದ್ದು ಶಾಸಕನಾದ ಮೊದಲ ಅವಧಿಯಲ್ಲಿಯೇ ಪಕ್ಷಾತೀತ ಮತ್ತು ಜಾತ್ಯತೀತವಾಗಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಸಾರ್ವಜನಿಕ ಪರ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.
ಈ ಸಂದರ್ಭ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ದೇವಿಕಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು, ಪುರಸಭೆ ಅಧ್ಯಕ್ಷ ಮಂಜುನಾಥ್ ಸಿಂಗ್, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್ ವಿನೋದ್, ಸದಸ್ಯರಾದ ಪಿ.ಸಿ.ಕೃಷ್ಣ, ಕೆ.ಮಹೇಶ್, ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಸಾರ್ವಜನಿಕ ಆಸ್ಪತ್ರೆ ತಜ್ಞ ವೈದ್ಯರಾದ ಡಾ.ಅನಿಲ್, ಡಾ.ಸದಾಶಿವ, ಡಾ.ಪ್ರಭು, ಡಾ.ಪೃಥ್ವಿ, ಡಾ.ಶ್ರವಣ್, ಡಾ.ವಿಕ್ರಂ ಮತ್ತು ಸಿಬ್ಬಂದಿ ಆರೋಗ್ಯ ರಕ್ಷ ಸಮಿತಿ ಸದಸ್ಯೆ ಶುಭಾಗೌಡ ಮತ್ತಿತರಿದ್ದರು.