
ಪಿರಿಯಾಪಟ್ಟಣ: ತಾಲ್ಲೂಕಿನ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಪಕ್ಷಾತೀತವಾಗಿ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.
ತಾಲ್ಲೂಕಿನ ವಿವಿಧೆಡೆ 1.85 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ವಿಪಕ್ಷ ಶಾಸಕನಾಗಿದ್ದರೂ ಸಚಿವರು ಹಾಗೂ ಇಲಾಖೆ ಮೇಲಧಿಕಾರಿಗಳಿಗೆ ತಾಲ್ಲೂಕಿನ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿ ಅನುದಾನ ಮಂಜೂರು ಮಾಡಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ ಇದನ್ನು ಸಹಿಸದ ವಿರೋಧ ಪಕ್ಷದವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು ಮತದಾರರು ವದಂತಿಗಳಿಗೆ ಕಿವಿಕೊಡದೆ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮುಂಬರುವ ಚುನಾವಣೆಯಲ್ಲಿಯೂ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಕೋರಿದರು.
ತಾಲ್ಲೂಕಿನ ಮೂಲಭೂತ ಸೌಕರ್ಯ ವಂಚಿತ ಹಳ್ಳಿಗಳ ಅಭಿವದ್ಧಿಗೆ ಆದ್ಯತೆ ಮೇಲೆ ಅನುದಾನ ನೀಡುತ್ತಿದ್ದು ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಕರ್ತವ್ಯ ನಿರ್ವಹಿಸುತ್ತಿದ್ದೇನೆ, ದೂರದ ಊರುಗಳಿಗೆ ಹೋಗಿ ಪಡಿತರ ತರುವುದನ್ನು ತಪ್ಪಿಸಲು ತಾಲ್ಲೂಕಿನ ವಿವಿಧೆಡೆ ನೂತನ ಪಡಿತರ ಉಪ ಕೇಂದ್ರಗಳಿಗೆ ಚಾಲನೆ ನೀಡಿದ್ದೇನೆ ಎಂದರು.
ಈ ವೇಳೆ ಕಿತ್ತೂರು 46 ಲಕ್ಷ , ಟಿ.ಗುರುವಯ್ಯನ ಕೊಪ್ಪಲು 18 ಲಕ್ಷ , ಲಕ್ಷ್ಮೀಪುರ ಗ್ರಾಮದಲ್ಲಿ 21 ಲಕ್ಷ ವೆಚ್ಚದ ಕುಡಿಯುವ ನೀರಿನ ಮೇಲ್ತೊಟ್ಟಿ ಕಾಮಗಾರಿಗೆ ಚಾಲನೆ, ಗಳಗನಕೆರೆ ಗ್ರಾಮದಲ್ಲಿ 1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ತರಿಕಲ್ಲು ಗ್ರಾಮದಲ್ಲಿ ನೂತನ ಪಡಿತರ ಉಪ ಕೇಂದ್ರ ಉದ್ಗಾಟನೆಯನ್ನು ಶಾಸಕರು ನೆರವೇರಿಸಿದರು.
ಈ ಸಂದರ್ಭ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಜಿ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಎಸ್ ಮಂಜುನಾಥ್, ಯುವ ಮುಖಂಡ ಗಗನ್, ಜಿಲ್ಲಾ ಯುವ ಘಟಕ ಕಾರ್ಯದರ್ಶಿ ಯಶವಂತ್, ಮುಖಂಡರಾದ ರಘುನಾಥ್, ಕೃಷ್ಣೆಗೌಡ, ಮಹದೇವಶೆಟ್ಟಿ, ಪುಟ್ಟಸ್ವಾಮಿ, ಗಣೇಶ್, ಆರ್ ಡಬ್ಲ್ಯೂಎಸ್ ಎಇಇ ಪ್ರಭು, ಆಹಾರ ಇಲಾಖೆ ಶಿರಸ್ತೇದಾರ್ ಸಣ್ಣಸ್ವಾಮಿ, ಕಂದಾಯ ನಿರೀಕ್ಷಕ ಪ್ರದೀಪ್, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮದ ಮುಖಂಡರು ಹಾಜರಿದ್ದರು.