ಸಹಕಾರ ಸಂಘಗಳಲ್ಲಿ ರಾಜಕೀಯ ಬೆರೆಸದೆ ಸದಸ್ಯರ ಶ್ರೇಯೋಭಿವೃದ್ಧಿಗೆ ಶ್ರಮಿಸಿದಾಗ ಮಾತ್ರ ಅಭಿವೃದ್ಧಿ ಪಥದಲ್ಲಿ ಸಾಗಬಹುದು – ಶಾಸಕ ಕೆ.ಮಹದೇವ್

ಪಿರಿಯಾಪಟ್ಟಣ: ರೈತರಿಗೆ ಸಹಕಾರ ಸಂಘಗಳ ಮೂಲಕ ದೊರೆಯುವ ಸವಲತ್ತುಗಳನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ನೂತನವಾಗಿ ಗೋದಾಮು ಹಾಗೂ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಅನುದಾನ ನೀಡಲಾಗುತ್ತಿದೆ ಎಂದು ಅಪೆಕ್ಸ್ ಬ್ಯಾಂಕ್ ರಾಜ್ಯ ಉಪಾಧ್ಯಕ್ಷ ಹಾಗು ಎಂಡಿಸಿಸಿ ಬ್ಯಾಂಕ್ ಜಿಲ್ಲಾಧ್ಯಕ್ಷ ಜಿ.ಡಿ ಹರೀಶ್ ಗೌಡ ಹೇಳಿದರು.ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಪಿಎಸಿಸಿಎಸ್ ವತಿಯಿಂದ ನೂತನವಾಗಿ ನಿರ್ಮಿಸಿರುವ ಗೋದಾಮು ಹಾಗೂ ವಾಣಿಜ್ಯ ಮಳಿಗೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು, ಆಡಳಿತ ಮಂಡಳಿಯ ದೂರದೃಷ್ಟಿ ಹಾಗು ಪಾರದರ್ಶಕ ಆಡಳಿತದಿಂದ  ಹಿಟ್ನೆಹೆಬ್ಬಾಗಿಲು ಪಿಎಸಿಸಿಎಸ್ ವತಿಯಿಂದ ಉತ್ತಮ ಕಟ್ಟಡ ನಿರ್ಮಿಸಿ ಸಹಕಾರ ಸಂಘದ ಸದಸ್ಯರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ, ಯಾವುದೇ ಸಹಕಾರ ಸಂಘಗಳು ವಾಣಿಜ್ಯ ಮಳಿಗೆ ಗೋದಾಮು ನಿರ್ಮಿಸಲು ಇಚ್ಛೆಪಟ್ಟಲ್ಲಿ ಎಂಡಿಸಿಸಿ ಬ್ಯಾಂಕ್ ಅಪೆಕ್ಸ್ ಬ್ಯಾಂಕ್ ಹಾಗೂ ಸ್ಥಳೀಯ ಶಾಸಕರ ನಿಧಿಯಿಂದ ಅನುದಾನ ನೀಡಲು ಸಿದ್ಧರಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.ಶಾಸಕ ಕೆ.ಮಹದೇವ್ ಅವರು ಮಾತನಾಡಿ ಸಹಕಾರ ಸಂಘಗಳಲ್ಲಿ ರಾಜಕೀಯ ಬೆರೆಸದೆ ಸದಸ್ಯರ ಶ್ರೇಯೋಭಿವೃದ್ಧಿಗೆ ಶ್ರಮಿಸಿದಾಗ ಮಾತ್ರ ಅಭಿವೃದ್ಧಿ ಪಥದಲ್ಲಿ ಸಾಗಬಹುದು, ಸಹಕಾರ ಸಂಘಗಳಲ್ಲಿ ಸಿಗುವ ಕಡಿಮೆ ಹಾಗೂ ಸಬ್ಸಿಡಿ ದರದಲ್ಲಿನ ಸಾಲಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಮನವಿ ಮಾಡಿದರು.ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಅವರು ಮಾತನಾಡಿ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಬಡ್ಡಿದರದಲ್ಲಿ ಹೊರಗೆ ಸಾಲ ಮಾಡುವ ಬದಲು ಸಹಕಾರ ಸಂಘದಲ್ಲಿ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ರೈತರು ಕೃಷಿಯ ಜತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಮನವಿ ಮಾಡಿದರು.ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಹಾಗೂ ಸಹಕಾರ ಸಂಘದ ಆಡಳಿತ ಮಂಡಳಿಯವರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಅಧ್ಯಕ್ಷ ಹೆಚ್.ಈ ಶಂಕರ, ಉಪಾಧ್ಯಕ್ಷೆ ಜ್ಯೋತಿ ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಪಿ ಸುನಿಲ್, ನಿರ್ದೇಶಕ ಸಿ.ಎನ್ ರವಿ, ಸಿಇಒ ಜನಾರ್ದನ, ಸಹಕಾರ ಒಕ್ಕೂಟದ ನಿರ್ದೇಶಕ ಕೆ.ಕೆ ಹರೀಶ್, ಸಹಕಾರ ಸಂಘಗಳ ಉಪ ನಿಬಂಧಕ ಪ್ರಕಾಶ್ ರಾವ್, ಪ್ರಧಾನ ವ್ಯವಸ್ಥಾಪಕ ಎಂ.ಪಿ ಶಶಿಧರ್, ಸಿಡಿಒ ಪ್ರಸಾದ್, ಶಾಖಾ ವ್ಯವಸ್ಥಾಪಕ ವೆಂಕಟಾಚಲ, ಸಂಘದ ನಿರ್ದೇಶಕರಾದ ಮುತ್ತೇಗೌಡ, ವಿನೋದ್ ಕುಮಾರ್, ಎಚ್.ಎಸ್ ಕುಮಾರ್, ಹೆಚ್.ಪಿ ಅನಿಲ್ ಕುಮಾರ್, ಎಚ್.ಎಸ್ ರವಿ, ಗಾಯಿತ್ರಮ್ಮ, ಡಿ.ಮಹಾದೇವ, ರಾಮನಾಯಕ, ನಾಗೇಂದ್ರ, ಬ್ಯಾಂಕ್ ಪ್ರತಿನಿಧಿ ಎಚ್.ಕೆ ಜಗದೀಶ್, ಸಿಇಒ ಕೆ.ಪಿ ಜಯರಾಮ, ಸಿಬ್ಬಂದಿ ನಟರಾಜು, ಸಂತೋಷ್, ಶ್ರೀನಿವಾಸ್, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top