ಪಟ್ಟಣದ ಹೊರವಲಯದ ಹರವೆ ಮಲ್ಲರಾಜಪಟ್ಟಣ ಬಳಿಯ ಐಟಿಐ ಸಂಸ್ಥೆಯನ್ನು 30.91 ಕೋಟಿ ವೆಚ್ಚದಲ್ಲಿ ತಾಂತ್ರಿಕ ಕೇಂದ್ರವನ್ನಾಗಿಸಿ ಉನ್ನತೀಕರಿಸಲಾದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು, ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಎರಡು ಐಟಿಐ ಕಾಲೇಜನ್ನು ಉನ್ನತೀಕರಿಸಿ ಲೋಕಾರ್ಪಣೆ ಮಾಡಲಾಗಿದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ 30.91ಕೋಟಿ ವೆಚ್ಚದಲ್ಲಿ ವಿನೂತನ ಕಟ್ಟಡ, ಹೆಚ್ಚು ಬೆಲೆಯ ಆಧುನಿಕ ಯಂತ್ರೋಪಕರಣ ಹಾಗೂ ಹೊಸ ಶೈಲಿಯ ರೋಬೊ ಶಿಕ್ಷಣ ಉದ್ಘಾಟನೆ ಮಾಡಲಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾದ 150 ಐಟಿಐ ಉನ್ನತೀಕರಿಸಿದ ಕೇಂದ್ರಗಳಲ್ಲಿ ತಾಲ್ಲೂಕಿನ ಎರಡು ಐಟಿಐ ಸೇರಿರುವುದು ಶ್ಲಾಘನೀಯ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಇದನ್ನು ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಂಡು ಜೀವನದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು, ಒಂದೇ ಕ್ಷೇತ್ರದಲ್ಲಿ ಎರಡು ಸರ್ಕಾರಿ ಐಟಿಐ ಉನ್ನತೀಕರಣಗೊಳಿಸಲು ಅನುದಾನ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭ ಪುರಸಭಾ ಅಧ್ಯಕ್ಷ ಕೆ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ, ಸದಸ್ಯರಾದ ಪ್ರಕಾಶ್ ಸಿಂಗ್, ಭಾರತಿ, ಪುಷ್ಪಲತಾ, ಟಿಎಪಿಸಿಎಂಎಸ್ ಅಧ್ಯಕ್ಷ ದೊರೆಕೆರೆ ನಾಗೇಂದ್ರ, ಮುಖಂಡರಾದ ಗಗನ್, ಉಮೇಶ್, ಟಿ.ರಾಜು, ನಿರ್ಮಿತಿ ಕೇಂದ್ರದ ಅಧಿಕಾರಿ ರಕ್ಷಿತ್ ಪ್ರಾಂಶುಪಾಲ ಶ್ರೀಧರ್ ಹಾಗೂ ತರಬೇತಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.
