ಪಿರಿಯಾಪಟ್ಟಣ: ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಿ -ಶಾಸಕ ಕೆ. ಮಹದೇವ್

ತಾಲೂಕಿನ ಚರಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘ  ಉದ್ಘಾಟಿಸಿ ಅವರು ಮಾತನಾಡಿದರು, ಸಹಕಾರ ಸಂಘದ ಸದಸ್ಯರು ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಹೆಚ್ಚಿನ ಲಾಭಾಂಶ ಪಡೆಯಬೇಕು, ಹೈನುಗಾರಿಕೆ ಪ್ರೋತ್ಸಾಹಿಸುವ ಸಲುವಾಗಿ ಸರ್ಕಾರ ಸಬ್ಸಿಡಿ ದರದಲ್ಲಿ ಹಲವು ಸವಲತ್ತು ವಿತರಿಸುತ್ತಿದ್ದು ಅವುಗಳ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಅವರು ಮಾತನಾಡಿ ಕಳೆದ 6 ವರ್ಷಗಳಿಂದ ತಾಲ್ಲೂಕಿನಲ್ಲಿ ಹಾಲು ಉತ್ಪಾದನೆಯಲ್ಲಿ ಗಣನೀಯ ಏರಿಕೆಯಾಗಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆಯಲಾಗಿದೆ, ಅತಿ ಹೆಚ್ಚು ಬಿಎಂಸಿ ಕೇಂದ್ರ ಮತ್ತು ಹೊಸ ಕಟ್ಟಡ ನಿರ್ಮಿಸಲು ಮೈಮುಲ್ ವತಿಯಿಂದ ಆರ್ಥಿಕ ಸಹಾಯ ನೀಡಲಾಗಿದ್ದು ಷೇರುದಾರರು ಸಹಕಾರ ಸಂಘದಲ್ಲಿ ದೊರೆಯುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.ಈ ಸಂದರ್ಭ ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ತಾ.ಪಂ ಮಾಜಿ ಸದಸ್ಯರಾದ ರಂಗಸ್ವಾಮಿ, ರಘುನಾಥ್, ಸೋಮಶೇಖರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ,  ಟಿಎಪಿಸಿಎಂಎಸ್ ಉಪಾಧ್ಯಕ್ಷ ಜಲೇಂದ್ರ, ಗ್ರಾ.ಪಂ ಸದಸ್ಯ ಮುತ್ತಿನಮುಳುಸೋಗೆ ಶಿವಕುಮಾರ್, ಲೋಕೇಶ್, ಮುಖಂಡರಾದ ಗಗನ್, ಅಶೋಕ್, ಪುರುಷೋತ್ತಮ್, ಮಹದೇವ್, ಗಣೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಹಾರಂಗಿ ಪುನರ್ವಸತಿ ವಿಭಾಗದ ಎಇಇ ನವೀನ್ ಕುಮಾರ್, ಜಿ.ಪಂ ಎಇಇ ಹರ್ಷದ್ ಪಾಷಾ, ಬಿಸಿಎಂ ವಿಸ್ತರಣಾಧಿಕಾರಿ ಪ್ರೇಮ್ ಕುಮಾರ್, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರಸಾದ್, ಕಂದಾಯ ಅಧಿಕಾರಿ ಪ್ರದೀಪ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಗ್ರಾಮದ ಮುಖಂಡರು ಇದ್ದರು.       

Leave a Comment

Your email address will not be published. Required fields are marked *

error: Content is protected !!
Scroll to Top