ತಾಲ್ಲೂಕಿನ ಕೋಟಯ್ಯನ ಕೊಪ್ಪಲು ಗ್ರಾಮದಲ್ಲಿ1.50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು, ತಾಲ್ಲೂಕು ಅಭಿವೃದ್ಧಿ ಹಿತದೃಷ್ಟಿಯಿಂದ ವಿಪಕ್ಷ ಶಾಸಕನಾಗಿದ್ದರೂ ಸರ್ಕಾರದ ಮೇಲೆ ಒತ್ತಡ ಹೇರಿ ಅನುದಾನ ತರಲಾಗುತ್ತಿದ್ದು ಹಂತ ಹಂತವಾಗಿ ತಾಲೂಕಿನ ಹಿಂದುಳಿದ ಗ್ರಾಮಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ, ತಮ್ಮ ಗ್ರಾಮಗಳಲ್ಲಿ ಸರ್ಕಾರಿ ಅನುದಾನದ ಕಾಮಗಾರಿಗಳು ನಡೆಯುವ ಸಂದರ್ಭ ಗ್ರಾಮಸ್ಥರು ನಿಗಾವಹಿಸಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಬೇಕು, ಸ್ಥಳೀಯ ಜನಪ್ರತಿನಿಧಿಗಳು ಸಹ ಸ್ಥಳೀಯ ಸಂಸ್ಥೆಯ ಅನುದಾನ ಪಡೆದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.ಇದೇ ವೇಳೆ ಚಿಕ್ಕನೇರಳೆ ಗ್ರಾಮದಲ್ಲಿ 11 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಶಾಲಾ ಕೊಠಡಿ ಹಾಗೂ ನಂದಿನಿ ಹಾಲಿನ ಕೇಂದ್ರದ ಬೂತ್ ಅನ್ನು ಶಾಸಕರು ಉದ್ಘಾಟಿಸಿದರು.ಈ ಸಂದರ್ಭ ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಆರ್ ಡಬ್ಲ್ಯುಎಸ್ ಇಲಾಖೆ ಎಇಇ ಪ್ರಭು, ಬಿಇಒ ವೈ.ಕೆ ತಿಮ್ಮೇಗೌಡ, ಸಿಡಿಪಿಒ ಮಮತಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರತ್ ಬಾಬು, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಗ್ರಾಮದ ಮುಖಂಡರು ಇದ್ದರು.