ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಮ್ಮ ಅನುದಾನದಲ್ಲಿ ನಿರ್ಮಿಸಿರುವ ರಂಗಮಂಟಪ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ,ಎಚ್.ವಿಶ್ವನಾಥ್ ಅವರ ರಾಜಕೀಯ ಮುತ್ಸದ್ದಿತನ ಎಲ್ಲರಿಗೂ ಮಾದರಿ, ಶಿಕ್ಷಣ ಸಹಕಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬೆಳವಣಿಗೆಗಳ ಮೂಲಕ ರಾಜ್ಯದ ಮನೆ ಮಾತಾಗಿರುವ ಕೆಲಸ ನಿರ್ವಹಿಸಿದ್ದರು, ತಾಲ್ಲೂಕಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಅನುದಾನ ಮಂಜೂರು ಮಾಡಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸ್ಥಳೀಯ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಈ ವೇಳೆ ಗ್ರಾ.ಪಂ ಸದಸ್ಯರಾದ ಅನಿಲ್ ಕುಮಾರ್ ಹಾಗೂ ಕಾಮರಾಜ್ ಅವರು ಮಾತನಾಡಿ ಹಿಟ್ನೆಹೆಬ್ಬಾಗಿಲು ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ಮನವಿ ಮಾಡಿದ್ದಕ್ಕೆ ಶಾಸಕ ಕೆ.ಮಹದೇವ್ ಹಾಗೂ ಎಚ್. ವಿಶ್ವನಾಥ್ ಅವರು ಪ್ರತಿಕ್ರಿಯಿಸಿ ಮುಂದಿನ ದಿನಗಳಲ್ಲಿ ಇಬ್ಬರೂ ಒಟ್ಟುಗೂಡಿ ಸರ್ಕಾರದ ಗಮನ ಸೆಳೆದು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಗ್ರಾ.ಪಂ ಅಧ್ಯಕ್ಷೆ ಛಾಯಾ ಮಹದೇವ್, ಉಪಾಧ್ಯಕ್ಷ ಮಂಜುನಾಯಕ ಮತ್ತು ಸದಸ್ಯರು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಆರ್ ಡಬ್ಲ್ಯುಎಸ್ ಇಲಾಖೆ ಎಇಇ ಪ್ರಭು, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವ್ ಮತ್ತು ಸದಸ್ಯರು, ಪಿಡಿಒ ದೇವರಾಜೆಗೌಡ, ನಾಗೇಂದ್ರ ಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರು ಗ್ರಾಮದ ಮುಖಂಡರು ಇದ್ದರು.