ರಿಯಾಪಟ್ಟಣ: ವಿವಿಧ ಇಲಾಖೆಗಳ ಮೂಲಕ ರೈತರಿಗೆ ದೊರೆಯುವ ಸವಲತ್ತುಗಳ ಮಾಹಿತಿಯನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ತಲುಪಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು. ಪಟ್ಟಣದ ಶ್ರೀಕನ್ನಂಬಾಡಿಯಮ್ಮ ದೇವಾಲಯ ಬಳಿ ಸಮಗ್ರ ಕೃಷಿ ಅಭಿಯಾನ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರ್ಕಾರ ಮಹತ್ವದ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳಬೇಕಿದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಸಹ ತಮ್ಮ ಇಲಾಖೆಗಳ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಅವರು ಮಾತನಾಡಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಸಿಡಿಪಿಒ, ಪಶುವೈದ್ಯಕೀಯ ಇಲಾಖೆಗಳ ವತಿಯಿಂದ ರೈತರಿಗೆ ದೊರೆಯುವ ಸವಲತ್ತುಗಳ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಸಮಗ್ರ ಕೃಷಿ ಅಭಿಯಾನ ರಥ ತಾಲ್ಲೂಕಿನಾದ್ಯಂತ ಸಂಚರಿಸಲಿದೆ ಎಂದರು.
ಈ ಸಂದರ್ಭ ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಪುರಸಭೆ ಅಧ್ಯಕ್ಷ ಕೆ.ಮಹೇಶ್, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಕೃಷಿ ಅಧಿಕಾರಿಗಳಾದ ಮಹೇಶ್, ಹಿತೇಶ್, ಪ್ರವೀಣ್, ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರಸಾದ್, ಕೃಷ್ಣಕುಮಾರ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ
ಸಿ.ಎನ್ ರವಿ, ತಾ.ಪಂ ಮಾಜಿ ಸದಸ್ಯ ಎ.ಟಿ ರಂಗಸ್ವಾಮಿ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗೇಂದ್ರ, ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಇದ್ದರು.
