ಪಟ್ಟಣದ ಪುರಸಭೆ ಕಚೇರಿ ಬಳಿ ಹಾಜರಿದ್ದ ಮಾಜಿ ಸಚಿವ ಸಿ.ಎಚ್ ವಿಜಯಶಂಕರ್, ಕೆಡಬ್ಲ್ಯುಎಸ್ಎಸ್ ಬಿ ನಾಮ ನಿರ್ದೇಶಕ ಆರ್.ಟಿ ಸತೀಶ್ ಹಾಗು ಬಿಜೆಪಿ ಪಕ್ಷದ ತಾಲ್ಲೂಕು ಪದಾಧಿಕಾರಿಗಳು ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಸನ್ಮಾನಿಸಿದರು.
ಈ ವೇಳೆ ತಾಲೂಕು ಅಧ್ಯಕ್ಷ ಎಂ.ಎಂ ರಾಜೇಗೌಡ ಅವರು ಅತಿ ಹೆಚ್ಚು ಮಳೆಯಿಂದಾಗಿ ಸಂಕಷ್ಟಕ್ಕೊಳಗಾಗಿರುವ ತಾಲ್ಲೂಕಿನ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವುದು ಹಾಗೂ ಮಳೆಯಿಂದ ಹಾನಿಗೊಳಗಾದ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.
ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ ಅವರು ಮಳೆಯಿಂದ ತಾಲ್ಲೂಕಿನಲ್ಲಾಗಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ನೆರೆ ಸಂತ್ರಸ್ತರಿಗೆ ಅನುದಾನ ಮಂಜೂರು ಮಾಡುವ ಭರವಸೆ ನೀಡಿದರು.
ತಾಲ್ಲೂಕಿನ ಜೈನ ಹಾಗು ರಾಜಸ್ಥಾನ ಸಮಾಜದವರು ಮುಖ್ಯಮಂತ್ರಿಗಳನ್ನು ಸನ್ಮಾನಿಸಿದರು.
ಸಚಿವರುಗಳಾದ ಎಸ್.ಟಿ ಸೋಮಶೇಖರ್,
ಆರ್.ಅಶೋಕ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ ಸಿಇಒ ಮಂಜುಳಾ, ಉಪವಿಭಾಗಾಧಿಕಾರಿ ವರ್ಣಿತ್ ನೇಗಿ ಮುಖ್ಯಮಂತ್ರಿಗಳ ಜತೆಗಿದ್ದರು.
ಪೊಲೀಸ್ ವರಿಷ್ಠಾಧಿಕಾರಿ ಚೇತನ್, ಅಪರ ವರಿಷ್ಠಾಧಿಕಾರಿ ಶಿವಕುಮಾರ್, ಡಿವೈಎಸ್ ಪಿ ರವಿಪ್ರಸಾದ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಗಳಾದ ಜಗದೀಶ್, ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗಳಾದ ಪುಟ್ಟರಾಜು, ಗೋವಿಂದ್, ಎಚ್.ಡಿ ಕೋಟೆ ಇನ್ಸ್ ಪೆಕ್ಟರ್ ಬಸವರಾಜು ನೇತೃತ್ವ ಬಿಗಿ ಬಂದೋಬಸ್ತ್ ಒದಗಿಸಿ ಸುಗಮ ಸಂಚಾರಕ್ಕೆ ಕ್ರಮವಹಿಸಲಾಗಿತ್ತು.
