ತಾಲ್ಲೂಕು ಆಡಳಿತ, ತಾ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಈ ಬಾರಿಯ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಆದಿ ಚುಂಚನಗಿರಿ ವಿಶ್ವ ವಿದ್ಯಾನಿಲಯದ ಡೀನ್ ಡಾ.ಎ.ಟಿ ಶಿವರಾಮ್ ಅವರು ಪ್ರಧಾನ ಭಾಷಣಕಾರರಾಗಿ ಮಾತಾನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅಪಾರ, ಪೋಷಕರ ಅತಿಯಾದ ನಿರೀಕ್ಷೆಗಳಿಂದಾಗಿ ಶಿಕ್ಷಣ ಕ್ಷೇತ್ರ ಒತ್ತಡದಲ್ಲಿದೆ, ನಮ್ಮಲ್ಲಿ ಜ್ಞಾನದ ಕೊರತೆ ಇಲ್ಲ ಆದರೆ ಅದನ್ನು ಕ್ರಮಬದ್ಧವಾಗಿ ತಲುಪಿಸುವ ಕೆಲಸ ನಮ್ಮಿಂದ ಆಗಬೇಕಿದೆ ಎಂದರು.

ಶಾಸಕ ಕೆ.ಮಹದೇವ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿರುವ ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ನಾವೆಲ್ಲರು ಪ್ರತಿನಿತ್ಯ ಪೂಜಿಸಬೇಕಿದೆ ಎಂದರು.

ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ತಹಸೀಲ್ದಾರ್ ಕೆ.ಚಂದ್ರಮೌಳಿ, ತಾಪಂ ಇಒ ಸಿ.ಆರ್ ಕೃಷ್ಣಕುಮಾರ್, ಬಿಇಒ ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಾಮಚಂದ್ರ ಮಾತನಾಡಿದರು, ನಿವೃತ್ತ ಶಿಕ್ಷಕರಿಗೆ  ಸನ್ಮಾನ ಹಾಗೂ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು, ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಪೊಲೀಸ್ ಠಾಣೆ ಬಳಿಯಿಂದ ಬಿ.ಎಂ ರಸ್ತೆ ಮುಖಾಂತರ ಆದಿಚುಂಚನಗಿರಿ ಸಮುದಾಯ ಭವನದವರೆಗೆ ವಿಶೇಷವಾಗಿ ಅಲಂಕರಿಸಿದ್ದ ಬೆಳ್ಳಿ ರಥದಲ್ಲಿ ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ ಪ್ರತಿಮೆಯನ್ನು ವಿವಿಧ ಜಾನಪದ ಕಲಾ ತಂಡ ಹಾಗೂ ಪೂರ್ಣಕುಂಭ ಕಳಸದೊಂದಿಗೆ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭ ಪುರಸಭೆ ಅಧ್ಯಕ್ಷ ಕೆ.ಮಹೇಶ್, ಉಪಾಧ್ಯಕ್ಷೆ ಪಿ.ಕೆ ಆಶಾ, ಸ್ಥಾಯಿ ಸಮಿತಿ ಅಧ್ಯಕ್ಷ 

ಪಿ.ಸಿ ಕೃಷ್ಣ ಮತ್ತು ಸದಸ್ಯರು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಎ ನಾಗೇಂದ್ರ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಕೆ.ಮೋಹನ್ ಕುಮಾರ್, ಕಸಾಪ ಅಧ್ಯಕ್ಷ ನವೀನ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಯ್ಯ, ಶಿಕ್ಷಕರ ವಿವಿಧ ಸಂಘಟನೆಗಳ ಅಧ್ಯಕ್ಷರಾದ ನಾಗಶೆಟ್ಟಿ, ಸುರೇಶ್, ಮಲ್ಲೇಶ್, ಪರಮಶಿವಯ್ಯ, ವೆಂಕಟೇಶ್, ಕಿಶೋರ್ ಆರಾಧ್ಯ, ಕೆ.ಕೆ.ಅನಿತ್, ಶಿವಮೂರ್ತಿ, ದೇವರಾಜು, ಯಮುನಾ, ಜಗದೀಶ್, ಮೇರಿ ಸ್ಟೆಲ್ಲಾ, ಕೆ.ಎಸ್ ಮಹದೇವಪ್ಪ ಮತ್ತಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top