
ಪಿರಿಯಾಪಟ್ಟಣ: ಅರಣ್ಯ ವೀಕ್ಷಕರು ಹಾಗೂ ಮಾವುತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಉತ್ತಮ ಕರ್ತವ್ಯ ನಿರ್ವಹಿಸಲು ಸಾಧ್ಯ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಗೆ ಬರುವ ಹುಣಸೂರು ವನ್ಯಜೀವಿ ವಿಭಾಗದ ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆಯಲ್ಲಿ ತೆರೆಯಲಾಗಿರುವ ನೂತನ ಆನೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು, ತಾಲ್ಲೂಕಿನ ಕಾಡಂಚಿನ ಗ್ರಾಮದ ನಿವಾಸಿಗಳಿಗೆ ಕಾಡುಪ್ರಾಣಿ ಹಾವಳಿಯಿಂದ ಆಗುತ್ತಿರುವ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕಾಗಿ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ ಅಧಿಕಾರಿಗಳು ಕಾಮಗಾರಿ ಅನುಷ್ಠಾನಕ್ಕಾಗಿ ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದರು.
ಮಡಿಕೇರಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ
ಎಸ್.ಎನ್ ಮೂರ್ತಿ ಅವರು ಮಾತನಾಡಿ ಸರ್ಕಾರದ ವತಿಯಿಂದ ಅರಣ್ಯ ಇಲಾಖೆ ಮೂಲಕ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಕಾಮಗಾರಿ ಅನುಷ್ಠಾನದ ಮಾಹಿತಿಯನ್ನು ಸ್ಥಳೀಯ ಶಾಸಕರಿಗೆ ಅಧಿಕಾರಿಗಳು ಮಾಹಿತಿ ನೀಡುವ ಮೂಲಕ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿ ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತೂರು ಬಳಿ ಸಫಾರಿ ಕೇಂದ್ರವನ್ನು ನವೆಂಬರ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭ ಹುಣಸೂರು ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ, ಹುಣಸೂರು ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್ ದಯಾನಂದ್, ನಾಗರಹೊಳೆ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಹುಣಸೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಎಂ.ಎ ರತನ್ ಕುಮಾರ್, ಆನೆಚೌಕೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಗಣರಾಜ್ ಪಟೇಗಾರ್, ಉಪವಲಯ ಅರಣ್ಯಾಧಿಕಾರಿ ಸಿದ್ದರಾಜು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಮುಖಂಡರಾದ ಗಗನ್, ಕಾಳೇಗೌಡ, ಹುಣಸೂರು ವನ್ಯಜೀವಿ ವಿಭಾಗದ ಉಪ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
