ಪಿರಿಯಾಪಟ್ಟಣ ತಾಲೂಕು ಕಸಾಪ ವತಿಯಿಂದ ನಡೆದ ಜವಾಬ್ದಾರಿ ಸ್ವೀಕಾರ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ಗಣ್ಯರು ವಿತರಿಸಿದರು

ಪಿರಿಯಾಪಟ್ಟಣ: ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ಇತರ ಭಾಷಿಕರಿಗೆ ತಿಳಿಸುವ ಮನೋಭಾವನೆಯನ್ನು ಕನ್ನಡಿಗರು ಬೆಳೆಸಿಕೊಳ್ಳಬೇಕಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ತಾಲೂಕು ಕಸಾಪ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಈವರೆಗೆ 57 ವರದಿಗಳನ್ನು ಮಂಡನೆ ಮಾಡಿದ್ದರೂ ಸಹ ಸರ್ಕಾರ ಒಂದು ವರದಿಯನ್ನು ಅನುಮೋದನೆ ಮಾಡದಿರುವುದು ವಿಷಾದಕರ, ಸರ್ಕಾರಿ ಉದ್ಯೋಗಗಳ ನೇಮಕಾತಿ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ಧೋರಣೆಯಿಂದಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ, ಕನ್ನಡದ ಬಗ್ಗೆ ಅತ್ಯಂತ ಕಾಳಜಿ ಹೊಂದಿರುವ ಶಾಸಕ ಕೆ.ಮಹದೇವ್ ಅವರು ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಆಸಕ್ತಿ ವಹಿಸಿರುವುದು ಶ್ಲಾಘನೀಯ ಎಂದರು.

ಶಾಸಕ ಕೆ.ಮಹದೇವ್ ಅವರು ಮಾತನಾಡಿ ತಾಲೂಕಿನಲ್ಲಿ ಕನ್ನಡ ಭಾಷೆ ಅಭಿವೃದ್ಧಿಗಾಗಿ ಕಸಾಪ ವತಿಯಿಂದ ಗಮನಾರ್ಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿರುವುದು ಸ್ವಾಗತ,  ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ಕನ್ನಡ ಸಾಹಿತಿಗಳ ಹೆಸರು ನೀಡುವ ಪ್ರಕ್ರಿಯೆ ಬಹುತೇಕ ಸರ್ಕಾರ ಹಂತದಲ್ಲಿ ಅಂತಿಮಗೊಂಡಿದ್ದು ಆದಷ್ಟು ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರುವ ವಿಶ್ವಾಸವಿದೆ ಎಂದರು.

ನಿಕಟ ಪೂರ್ವ ತಾಲೂಕು ಕಸಾಪ ಅಧ್ಯಕ್ಷ ಗೊರಹಳ್ಳಿ ಜಗದೀಶ್ ಅವರು ಮಾತನಾಡಿ ಕನ್ನಡ ನಾಡು ನುಡಿ ಸಾಹಿತ್ಯ ಕಟ್ಟಿ ಬೆಳೆಸುವ ವಿಚಾರದಲ್ಲಿ ನನ್ನ ಅಧಿಕಾರ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿ ಶಾಸಕ ಕೆ.ಮಹದೇವ್ ಅವರ ವಿಶೇಷ ಆಸಕ್ತಿಯಿಂದಾಗಿ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯ ಎಂದರು.

ರಾವಂದೂರು ಮುರುಗ ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ ಆಶೀರ್ವಚನ ನೀಡಿದರು, ಈ ವೇಳೆ ಪ್ರತಿಭಾವಂತ ವಿದ್ಯಾರ್ಥಿನಿ ಮೋನಿಷಾ ಮತ್ತು ಉದ್ಯಮಿ ಮಹೇಶ್ ಆಚಾರ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು, ತಾಲೂಕು ಕಸಾಪ ಗೆ ನೇಮಕಗೊಂಡಿರುವ ವಿವಿಧ ಹೋಬಳಿ ಘಟಕ ಮತ್ತು ಗ್ರಾಮ ಘಟಕ ಪದಾಧಿಕಾರಿಗಳಿಗೆ  ಜವಾಬ್ದಾರಿ ಆದೇಶ ಪತ್ರ ವಿತರಿಸಲಾಯಿತು, ತಾಲೂಕು ಎನ್ ಪಿಎಸ್ ನೌಕರರ ಸಂಘಟನೆ ವತಿಯಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರವನ್ನು ಒತ್ತಾಯಿಸುವಂತೆ ಸದನದಲ್ಲಿ ಚರ್ಚೆ ನಡೆಸಲು ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಕಸಾಪ ಜಿಲ್ಲಾ ಘಟಕ ಮಾಜಿ ಅಧ್ಯಕ್ಷರಾದ ಡಾ.ವೈ.ಡಿ ರಾಜಣ್ಣ, ಎಂ.ಚಂದ್ರಶೇಖರ್, ಮೈಸೂರು ನಗರ ಘಟಕ ಅಧ್ಯಕ್ಷ ಶಿವರಾಮ್, ಪುರಸಭೆ ಅಧ್ಯಕ್ಷ ಕೆ.ಮಹೇಶ್, ಕಸಾಪ ತಾಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್, ಗೌರವಾಧ್ಯಕ್ಷ ಅಣ್ಣಯ್ಯಶೆಟ್ಟಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ, ಸದಸ್ಯರಾದ ಶ್ವೇತ ಕುಮಾರ್, ಪ್ರಕಾಶ್ ಸಿಂಗ್, ನಿರಂಜನ್, ಎಚ್.ಕೆ ಮಂಜುನಾಥ್, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಶಿವಯೋಗ, ರೋಟರಿ ಐಕಾನ್ಸ್ ಅಧ್ಯಕ್ಷ ಕೆ.ರಮೇಶ್ ಹಾಗೂ ಕಸಾಪ ವಿವಿಧ ಘಟಕ ಪದಾಧಿಕಾರಿಗಳು ಸದಸ್ಯರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top