ಪಿರಿಯಾಪಟ್ಟಣದಲ್ಲಿ 100 ಕೋಟಿ ರೂ ಗಳ ವೆಚ್ಚದಲ್ಲಿ ಪಶು ಆಹಾರ ಘಟಕ ನಿರ್ಮಾಣ

ಪಶು ಆಹಾರ ಘಟಕದಿಂದ ಹರ್ಷ 100 ಕೋಟಿ ರೂಗಳ ವೆಚ್ಚದಲ್ಲಿ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ರಾಜ್ಯದ ಹತ್ತನೇ ಪಶು ಆಹಾರ ಘಟಕವನ್ನು ಮೈಸೂರು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಸ್ಥಾಪಿಸುತ್ತಿರುವುದು ತಾಲ್ಲೂಕಿನ ಜನತೆಗೆ ಹರ್ಷ ತಂದಿದೆ.
ತಾಲ್ಲೂಕಿನಲ್ಲಿ ಪಶು ಆಹಾರ ಘಟಕವನ್ನು ತಂದೆ ತರುತ್ತೇನೆ ಎಂದು ಪಣತೊಟ್ಟು ನಿಂತ ಮೈಮುಲ್ ಅಧ್ಯಕ್ಷ ಪಿಎಂ ಪ್ರಸನ್ನರವರ ಪರಿಶ್ರಮದಿಂದ ಪಶು ಆಹಾರ ಘಟಕಕ್ಕೆ 100 ಕೋಟಿ ರೂಗಳ ವೆಚ್ಚದಲ್ಲಿ ಶುಕ್ರವಾರ ಶಂಕು ಸ್ಥಾಪನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಅದೇ ರೀತಿ ಈ ಪಶು ಆಹಾರ ತಯಾರಿಕಾ ಕಾರ್ಖಾನೆ ನಿರ್ಮಿಸುವುದರಿಂದ ತಾಲೂಕಿನ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರೆಯುತ್ತಿದ್ದು ಅದರ ಜೊತೆಗೆ ತಾಲೂಕಿನಲ್ಲಿ ರೈತರು ಅತಿ ಹೆಚ್ಚಾಗಿ ಬೆಳೆಯುವ ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿ ರೈತರು ಉತ್ಸುಕರಾಗಿದ್ದಾರೆ. ಇದಕ್ಕೆ ಸಹಕಾರ ನೀಡಿದ ತಾಲೂಕಿನ ಶಾಸಕರಾದ ಕೆ ಮಹದೇವ್ ತಮ್ಮ ಪುತ್ರ ಮೈಮುಲ್ ಅಧ್ಯಕ್ಷ ಪಿಎಂ ಪ್ರಸನ್ನ ರವರ ಹೋರಾಟ ಮತ್ತು ಸತತ ಪ್ರಯತ್ನದಿಂದ ಈ ಪಶು ಆಹಾರ ಘಟಕ ನಿರ್ಮಾಣ ವಾಗಲು ಸಾಧ್ಯವಾಗುತ್ತಿದೆ. ಪಶು ಆಹಾರ ತಯಾರಿಕಾ ಕಾರ್ಖಾನೆ ನಿರ್ಮಾಣವಾಗುವುದರಿಂದ ಪಶು ತಯಾರಿಕ ಘಟಕಕ್ಕೆ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿ ಮಾಡುವುದರಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ರೈತರು ಉತ್ಪಾದನೆ ಮಾಡಿ ಬೆಳೆಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿ ತಾಲೂಕಿನ ಜನತೆ ತುಂಬಾ ಆಶಾದಾಯಕರಾಗಿದ್ದಾರೆ. ಅದೇ ರೀತಿ ತಾಲೂಕಿನಾದ್ಯಂತ ಸುಮಾರು 200ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳು ಇದ್ದು, ಸರಿಯಾದ ಸಮಯಕ್ಕೆ ರಾಸುಗಳಿಗೆ ಪಶು ಆಹಾರ ದೊರೆಯದೆ ಅಂಗಡಿಗಳಲ್ಲಿ ಅತಿ ಹೆಚ್ಚಿನ ಬೆಲೆ ಕೊಟ್ಟು ಪಶು ಆಹಾರ ಖರೀದಿಸುತ್ತಿದ್ದರು. ಮೈಮುಲ ವತಿಯಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಪಶು ಆಹಾರ ಸರಬರಾಜು ಮಾಡಲಾಗುತ್ತಿತ್ತು. ಪ್ರತಿ ವರ್ಷ ಸುಮಾರು 6,000 ಮೆಟ್ರಿಕ್ ಟನ್ ಪಶು ಆಹಾರವನ್ನು ಹಾಸನ ಮತ್ತು ಕಲ್ಬುರ್ಗಿಯಿಂದ ಆಮದು ಮಾಡಿಕೊಂಡು ರೈತರಿಗೆ ವಿತರಿಸಲಾಗುತ್ತಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ನೂತನವಾಗಿ ಆಯ್ಕೆಯಾದ ಮೈಮುಲ್ ಅಧ್ಯಕ್ಷ ಪಿಎಂ ಪ್ರಸನ್ನ ಮತ್ತು ಶಾಸಕ ಕೆ ಮಹದೇವ್ ಬಿಜೆಪಿ ಸಂಸದ ಪ್ರತಾಪ್ ಸಿಂಹ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಉತ್ತಮ ಸಂಪರ್ಕ ಬಿಟ್ಟುಕೊಂಡು ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪನೆ ಆಗಬೇಕಾದ ಘಟಕವನ್ನು ತಾಲೂಕು ಕೇಂದ್ರದಲ್ಲಿ ಸ್ಥಾಪಿಸುತ್ತಿರುವುದು ತಾಲೂಕಿನ ಅಭಿವೃದ್ಧಿಗೆ ಸಹಕಾರ ವಾಗಲಿದೆ. ಈ ಭಾಗದಲ್ಲಿ ಅತಿ ಹೆಚ್ಚು ಮೆಕ್ಕೆಜೋಳವನ್ನು ಬೆಳೆಯುವುದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದ್ದು ಅದರ ಲಾಭವನ್ನು ರೈತರಿಗೆ ನೀಡಬಹುದಾಗಿದೆ.

Leave a Comment

Your email address will not be published. Required fields are marked *

error: Content is protected !!
Scroll to Top