ನಾನು ಶಾಸಕನಾಗಿ ಆಯ್ಕೆಗೊಂಡ ಸಂದರ್ಭದಿAದ ಚಾಲನೆ ನೀಡಿರುವ ಅಭಿವೃದ್ಧಿ ಕಾಮಗಾರಿಗಳು ಯಾವುದಾದರು ಆರಂಭಗೊಳ್ಳದೇ ಬಾಕಿ ಇರುವುದನ್ನು ತೋರಿಸದರೆ ಕ್ಷಣದಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ಬೆಟ್ಟದಪುರ ಸಮೀಪದ ಸೂಳೆಕೋಟೆ ಗ್ರಾಮದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಕರೊನಾ, ಅತಿಯಾದ ಮಳೆಯ ಸಮಸ್ಯೆಗಳನ್ನು ಮೂರು ವರ್ಷ ಎದುರಿಸಿ, ನಮ್ಮ ಪಕ್ಷದ ಸರ್ಕಾರ ಇಲ್ಲದಿದ್ದರೂ, ಈಗಿನ ಸರ್ಕಾರದ ಮಂತ್ರಿ ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಿರಿಯಾಪಟ್ಟಣ ತಾಲೂಕಿನಲ್ಲಿ ಹೆಚ್ಚಿನ ಅಭಿವೃದ್ಧಿಗೆ ಶ್ರಮವಹಿಸಿದ್ದೇನೆ. ಅಭಿವೃದ್ಧಿ ಕೆಲಸಗಳನ್ನು ಸಹಿಸದ ವಿರೋಧಿಗಳು ಗ್ರಾಮಾಂತರ ಪ್ರದೇಶದಲ್ಲಿ ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ತಾಲೂಕಿನ ಜನರು ತಲೆಕೆಡಿಸಿಕೊಳ್ಳಬಾರದು. ಅನುದಾನ ಬಿಡುಗಡೆಯಾದ ಬಳಿಕವೇ ನಾನು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದೇನೆ. ಇಲ್ಲಸಲ್ಲದ ಅಪಪ್ರಚಾರ ಮಾಡುವರು ಪ್ರಾರಂಭಗೊಳ್ಳದೇ ಇರುವು ಕಾಮಗಾರಿಗಳನ್ನು ಮೊದಲು ತೋರಿಸಿ ಸಾಬೀತುಪಡಿಸಿಲಿ ಎಂದು ಸವಾಲು ಹಾಕಿದರು.
ಮಾಜಿ ಶಾಸಕರಿಗೆ ಸೋಲಿನ ಭಯ ಕಾಡುತ್ತಿದ್ದು, ತಾಲೂಕಿನಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡಿಕೊಂಡು ತಿರುಗಾಡುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುವಂತೆ ಕರೆ ನೀಡಿದರು. ಅಭಿವೃದ್ಧಿ ಕೆಲಸ ಮಾಡುತ್ತ ದುಡಿಯುತ್ತಿರುವ ನನಗೆ ಮುಂಬರುವ ಚುನಾವಣೆಯಲ್ಲಿ ಜನರು ಆರ್ಶಿವಾದ ಮಾಡಿ ಅವಕಾಶ ನೀಡಿದರೆ, ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರ ಸೇವೆ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಸುಮಾರು 40 ಲಕ್ಷ ರೂ ವೆಚ್ಚ ಸಿ.ಸಿ ರಸ್ತೆ ಅಭಿವೃದ್ಧಿ ಹಾಗೂ 12 ಲಕ್ಷ ರೂ. ವೆಚ್ಚದ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಕ್ಕೆ ಶಾಸಕ ಕೆ.ಮಹದೇವ್ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ದೊಡ್ಡಕಮರಹಳ್ಳಿ ಗ್ರಾ.ಪಂ ಅಧ್ಯಕ್ಷ ಚಂದ್ರೇಗೌಡ, ಸದಸ್ಯ ಸತೀಶ್ ರಾಮ್, ಅಶೋಕ, ಹರೀಶ್, ಮುಖಂಡರಾದ ಭೀಮಯ್ಯ, ಕಾಳಯ್ಯ, ಐಲಾಪುರ ರಾಮು, ಇಂದ್ರೇಶ್, ಮೋಹನ್ ರಾಜ್, ಹಾರಂಗಿ ಎಇಇ ನವೀನ್, ಮೈಸೂರು ನಿರ್ಮಿತಿ ಕೇಂದ್ರದ ಇಂಜಿನಿಯರ್ ರಕ್ಷಿತ್, ಲೋಕೋಪಯೋಗಿ ಇಲಾಖೆಯ ಜಿಇ ಕುಮಾರ್, ಉಪತಹಸೀಲ್ದಾರ್ ಮಹೇಶ್, ಕಂದಾಯ ನಿರೀಕ್ಷಕ ಎನ್.ಕೆ ಪ್ರದೀಪ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.