ಅಭಿವೃದ್ಧಿ ಸಹಿಸದೆ ಇಲ್ಲಸಲ್ಲದ ಆರೋಪ ಕಾಂಗ್ರೆಸ್ ಧೋರಣೆಗೆ ಶಾಸಕ ಕೆ ಮಹದೇವ ಬೇಸರ.
ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಗ್ರಾಮಾಂತರ ಭಾಗಕ್ಕೆ ತೆರಳಿ ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು ಜನರು ಅವರ ಮಾತುಗಳಿಗೆ ಕಿವಿ ಕೊಡಬಾರದು ಎಂದು ಶಾಸಕ ಕೆ ಮಹದೇವ್ ಮನವಿ ಮಾಡಿದರು ಸಮೀಪದ ಕಣಗಾಲು ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ರಸ್ತೆ ಮೂಲಸೌಕರ್ಯಗಳ ಕೊರತೆಗಳನ್ನು ಬಗೆಹರಿಸಿದ್ದೇನೆ ಈ ಕಾರಣಕ್ಕೆ ಸಾಕಷ್ಟು ಕಾಂಗ್ರೆಸ್ ಕಾರ್ಯಕರ್ತರು ಅಭಿವೃದ್ಧಿ ಕೆಲಸ ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಆದರೂ ತಾಲೂಕಿನಾದ್ಯಂತ ವಿರೋಧಿಗಳು ಆರೋಪ ಮಾಡುತ್ತಿದ್ದಾರೆ ಎಷ್ಟೇ ಆರೋಪ ಮಾಡಿದರು ಮುಂಬರುವ ಚುನಾವಣೆಯಲ್ಲಿ ಜನರ ಆಶೀರ್ವಾದ ನನ್ನ ಮೇಲೆ ಇದ್ದೇ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಣಗಾಲು ಗ್ರಾಮದ ಅಭಿವೃದ್ಧಿಗೆ ಸುಮಾರು 2 ಕೋಟಿ ರೂ ಅನುದಾನ ನೀಡಲಾಗಿದೆ ಜನರ ಆರೋಗ್ಯದ ಕಾಳಜಿಗಾಗಿ ಆಂಬುಲೆನ್ಸ್ ಬೇಕೆಂದು ಮನವಿ ಮಾಡಿದ್ದು ಶೀಘ್ರವೇ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಇವಳೆ ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ತಹಶೀಲ್ದಾರ್ ಕೆ ಚಂದ್ರಮೌಳಿ ಹಾರಂಗಿ ನವೀನ್ ಕುಮಾರ್ ಜಿಲ್ಲಾ ಪಂಚಾಯಿತಿ ಮಲ್ಲಿಕಾರ್ಜುನ್ ಮುಖಂಡರಾದ ಗಗನ್ ಹನುಮಂತು ಮಹದೇವ್ ಬಸವರಾಜು ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.