ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಶಾಸಕ ಕೆ ಮಹದೇವ್ ಸೂಚಿಸಿದರು.
ತಾಲೂಕಿನ ಶಾನಭೋಗನಹಳ್ಳಿ ಗ್ರಾಮ ಪರಿಮಿತಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ಅಭಿವೃದ್ಧಿಗೆ ಸತತವಾಗಿ ಮಂತ್ರಿಗಳ ಬಳಿ ಹೋಗಿ ಹಣಕಾಸನ್ನು ಕೇಳುತ್ತ ಪ್ರತಿ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಯನ್ನು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
2023ರ ಚುನಾವಣೆಯಲ್ಲಿ ಮತ್ತೊಂದು ಬಾರಿ ನನ್ನನ್ನು ಆಯ್ಕೆ ಮಾಡಿ ನಿಮ್ಮ ಋಣ ತೀರಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇಂದು ಸುಮಾರು ಒಂದು ಪಾಯಿಂಟ್ ಮೂರು ಸೊನ್ನೆ ಕೊಟ್ಟಿರು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಲಾಗಿದೆ ಕೇವಲ ನೆಪ ಮಾತ್ರಕ್ಕೆ ಮಾತ್ರ ಗುದ್ದಲಿ ಪೂಜೆ ನೆರವೇರಿಸಿ ಹೋಗುತ್ತಿಲ್ಲ ನಾನು ಮಾಡಿರುವಂತಹ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಕೆಲಸವು ಪೂರ್ಣಗೊಂಡಿವೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಮಾತನಾಡಿದರು. ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯಿತಿ ಎಡಬಲಿ ಮಲ್ಲಿಕಾರ್ಜುನ್ ನವೀನ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚಂದ್ರೇಗೌಡ ಉಪಾಧ್ಯಕ್ಷರಾದ ಧರ್ಮರಾಜ್ ಮುಖಂಡರಾದ ಗಿರೀಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.