ಪಿರಿಯಾಪಟ್ಟಣ ತಾಲೂಕಿನ ಗ್ರಾಮಾಂತರ ಪ್ರದೇಶಗಳು ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಸತತವಾಗಿ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಕೆ ಮಹದೇವ್ ತಿಳಿಸಿದರು. ಪಟ್ಟಣದ ಮೆಲ್ಲಹಳ್ಳಿಯಲ್ಲಿ ವಿವಿಧ ವಾರ್ಡ್ಗಳ ರಸ್ತೆ ಅಭಿವೃದ್ಧಿ 80 ಲಕ್ಷ ರೂಗಳ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದರು. ಪಟ್ಟಣ ಪ್ರದೇಶ ಮತ್ತು ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಯಲ್ಲಿ ಭೇಧ ಭಾವ ಮಾಡದೆ ಪ್ರಾಮಾಣಿಕವಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದು ಇದಕ್ಕೆ ಪೂರಕವಾಗಿ ತಾಲೂಕಿನ ಜನತೆ ಚುನಾಯಿತ ಸದಸ್ಯರು ಮತ್ತು ಅಧಿಕಾರಿಗಳು ಸ್ಪರ್ಧಿಸುತ್ತಿದ್ದು ಸರ್ಕಾರದ ಮಟ್ಟದಲ್ಲಿ ಪಟ್ಟಣದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಹಣವನ್ನು ನೀಡಲಾಗುತ್ತಿದೆ ಎಂದರು. ಪ್ರತಿನಿತ್ಯ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಗಲಿರುಳು ಎನ್ನದೆ ಕಾರ್ಯನಿರ್ವಹಿಸುತ್ತಿದ್ದು ಜನರು ನನ್ನ ಅಭಿವೃದ್ಧಿ ಕಾರ್ಯಗಳ ಮನಸ್ಸಿನಲ್ಲಿ ಇಟ್ಟುಕೊಂಡು ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮತಗಳನ್ನು ನೀಡುವ ಸಂದರ್ಭದಲ್ಲಿ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಾಯಕರನ್ನು ಗುರುತಿಸಿ ಮತ ನೀಡಬೇಕು ಎಂದರು. ಪುರಸಭಾಧ್ಯಕ್ಷ ಮಹೇಶ್ ಉಪಾಧ್ಯಕ್ಷರಾದ ಆಶಾ, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣ, ಸದಸ್ಯರಾದ ಮಂಜುನಾಥ್ ಸಿಂಗ್ ನಿರಂಜನ್ ಪ್ರಕಾಶ್ ಸಿಂಗ್ ಜಿಲ್ಲಾ ಪಂಚಾಯಿತಿ ಕಿರಿಯ ಇಂಜಿನಿಯರ್ ಸುಭಾಷ್, ಎಂ ಸಿ ಬಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ರವಿ, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರಾದ ಅಣ್ಣಯ್ಯ ಶೆಟ್ಟಿ ಮುಖಂಡರಾದ ರಘುನಾಥ್ ಕಿರಗೂರು ಮಹದೇವ್ ಜೆಸಿಬಿ ಮುತ್ತುರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು