ಗ್ರಾಮೀಣ ಜನರ ಸಮಸ್ಯೆಗಳನ್ನು ಅರಿತು ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾಕ್ಟರ್ ಕೆ ರಾಜೇಂದ್ರ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಹೋಬಳಿಯ ಮಕುದು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆಯ ಕಡೆ ಕಾರ್ಯಕ್ರಮವನ್ನು ನಡೆಸಲಾಯಿತು ಈ ವೇಳೆ ಶಾಸಕ ಕೆ ಮಹದೇವ್ರವರು ಮಾತನಾಡಿ ಅಧಿಕಾರಿ ಸ್ನೇಹಿತರುಗಳ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿತು ಅಂತಹ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಸಮಸ್ಯೆ ಮುಕ್ತ ಹಳ್ಳಿಗಳನ್ನಾಗಿ ಮಾಡಬೇಕು ಎಂಬ ಭಾವನೆ ಅಧಿಕಾರಿಗಳಲ್ಲಿ ಬಂದಾಗ ಮಾತ್ರ ಗ್ರಾಮೀಣ ಭಾಗದ ಜನರು ಸಮಸ್ಯೆ ಮುಕ್ತರಾಗಲು ಸಾಧ್ಯ ಎಂದು ತಿಳಿಸಿದರು. ಮೈಸೂರು ಜಿಲ್ಲೆಯಲ್ಲಿಯೇ ಪಿರಿಯಾಪಟ್ಟಣ ತಾಲ್ಲೂಕು ಹಿಂದುಳಿದ ತಾಲೂಕಾಗಿದ್ದು ಇದಕ್ಕೆ ಈ ಹಿಂದೆ ಅಧಿಕಾರ ನಡೆಸಿದ ಪ್ರತಿನಿಧಿಗಳೇ ನಿರ ಕಾರಣರಾಗಿರುತ್ತಾರೆ. ನನ್ನ ಅಧಿಕಾರ ಅವಧಿಯಲ್ಲಿ ಪ್ರಕೃತಿ ವಿಕೋಪ ಕರೋನಾ ಮಹಾಮಾರಿಗಳಿಂದ ಅಭಿವೃದ್ಧಿ ಕುಂಠಿತವಾಗಿತ್ತು ಆದರೆ ಕಳೆದ ಒಂದುವರೆ ವರ್ಷದಿಂದ ಮಾನ್ಯ ಮುಖ್ಯಮಂತ್ರಿಗಳು ಉಸ್ತುವಾರಿ ಸಚಿವರು ಮತ್ತು ಸಂಸದರ ಪ್ರೀತಿ ವಿಶ್ವಾಸದಿಂದ ತಾಲೂಕಿಗೆ ಹೆಚ್ಚು ಅನುದಾನ ತಂದು ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ 180ಕ್ಕೂ ಅರ್ಜಿಗಳು ಬಂದಿದ್ದು ಇದನ್ನು ಸ್ವತಹ ಜಿಲ್ಲಾಧಿಕಾರಿಗಳೇ ಅರ್ಜಿದಾರರನ್ನು ಸ್ಥಳದಲ್ಲೇ ಸಮಸ್ಯೆಗಳನ್ನು ಕೇಳಿ ಸೂಕ್ತ ಪರಿಹಾರವನ್ನು ನೀಡಲಾಯಿತು ಹಾಗೂ ಪ್ರಕೃತಿ ವಿಕೋಪದಲ್ಲಿ ಜನರು 10200 ಮನೆಗಳನ್ನು ಕಳೆದುಕೊಂಡಿದ್ದು ಮನೆ ಕಳೆದುಕೊಂಡವರಿಗೆ ಅನ್ಯಾಯವಾಗದಂತೆ ಮರುಪರಿಶೀಲಿಸಿ ಆದೇಶವನ್ನು ನೀಡುವಂತೆ ಮುಖ್ಯಮಂತ್ರಿಗಳಿಗೆ ಒತಾಯಿಸುವುದಾಗಿ ತಿಳಿಸಿದರು.